ಎಸ್ಟಿಗೆ ಸೇರಿಸಲು ಗೋಂಧಳಿ ಸಮುದಾಯ ಮೊರೆ

vidhanasoudha
Published on

ಬೆಂಗಳೂರು: ಇತರ ಹಿಂದುಳಿದ ವರ್ಗಗಳ ವ್ಯಾಪ್ತಿಗೆ ಬರುವ ಗೋಂಧಳಿ ಸಮುದಾಯವನ್ನು ಎಸ್ಟಿಗೆ ಸೇರಿಸುವ ಮೂಲಕ ಅಭಿವೃದ್ಧಿಗೆ ಅನುಕೂಲ ಮಾಡಿಕೊಡಬೇಕು ಎಂದು ಗೋಂಧಳಿ ಸಮುದಾಯ ರಾಜ್ಯ ಸರ್ಕಾರಕ್ಕೆ ಮೊರೆಯಿಟ್ಟಿದೆ. ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಗೋಂಧಳಿ ಸಮುದಾಯದ ರಾಜ್ಯಾಧ್ಯಕ್ಷ ವಿಠಲ ಬಿ.ಗಣಾಚಾರಿ ನೇತೃತ್ವದ ನಿಯೋಗ ಮಂಗಳವಾರ ಭೇಟಿ ಮಾಡಿ ಈ ಕುರಿತು ಮನವಿ ಸಲ್ಲಿಸಿದೆ.

ಸಮುದಾಯದ ಕುಲ ಶಾಸ್ತ್ರೀಯ ಅಧ್ಯಯನಕ್ಕಾಗಿ ಮೈಸೂರು ಬುಡಕಟ್ಟು ಅಧ್ಯಯನ ಸಂಸ್ಥೆಯು 22 ಲಕ್ಷ ರೂ. ಬಿಡುಗಡೆ ಮಾಡಬೇಕೆಂದು ಕೋರಿ ಸಮಾಜ ಕಲ್ಯಾಣ ಇಲಾಖೆಗೆ ಪತ್ರ ಬರೆದಿದ್ದು, ಈ ಬಗ್ಗೆ ಇಲಾಖೆಗೆ ಸೂಕ್ತ ಸೂಚನೆ ನೀಡಬೇಕು ಎಂದು ಕೋರಿದೆ.

ಅಲೆಮಾರಿ, ಅರೆ ಅಲೆಮಾರಿಗೆ ಸೇರಿದ 46 ಜಾತಿಗಳ ಪೈಕಿ ಗೋಂಧಳಿ ಒಂದಾಗಿದೆ. ಅತ್ಯಂತ ಸಣ್ಣ ಸಮುದಾಯವಾಗಿದ್ದು, ಉತ್ತರ ಕರ್ನಾಟಕದ 19 ಜಿಲ್ಲೆಗಳಲ್ಲಿ ವಾಸವಿದ್ದಾರೆ. ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಮತ್ತು ನಿದೇಶಕರನ್ನಾಗಿ ಅದೇ ಸಮುದಾಯದ ಅರ್ಹರನ್ನು ನೇಮಿಸಬೇಕು ಎಂದು ವಿನಂತಿಸಿದೆ. ನಿಯೋಗದಲ್ಲಿ ಸಮುದಾಯದ ಪ್ರಮುಖರಾದ ಪ್ರೊ.ಚಂದ್ರಶೇಖರ್ ವಾಸ್ಟರ್, ಮಾರ್ತಂಡಪ್ಪ ನಾಯ್ಕಲ್, ಸುಹಾಸ್ ಬಿಸೆ, ರಮೇಶ್ ಬಿಸೆ ಇದ್ದರು.

ಕ್ಷಣ ಕ್ಷಣದ ಸುದ್ದಿಗಳ ಅಪ್ಡೇಟ್ಸ್​ಗಾಗಿ ನಮ್ಮ ಫೇಸ್​ಬುಕ್​ ಪುಟ ಲೈಕ್ ಮಾಡಿ ಮತ್ತು ಫಾಲೋ ಮಾಡಿ..

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net