ಏಳು ವರ್ಷಗಳಲ್ಲಿ ಕೇಂದ್ರ ಸರ್ಕಾರದಿಂದ ಸಂಸ್ಕೃತಕ್ಕೆ ಸಿಕ್ಕಿದ್ದು 640 ಕೋಟಿ ರೂಪಾಯಿ; ಆದರೆ ಕನ್ನಡಕ್ಕೆ..?!

Kannada
Published on

ನವದೆಹಲಿ: ಕೇಂದ್ರ ಸರ್ಕಾರ ಹಿಂದಿಯನ್ನು ಹೇರುತ್ತಿದೆ, ಕನ್ನಡವನ್ನು ಕಡೆಗಣಿಸುತ್ತಿದೆ ಎಂಬ ಆರೋಪ-ಪ್ರತ್ಯಾರೋಪಗಳ ನಡುವೆ ಕೇಂದ್ರ ಸರ್ಕಾರ ಕಳೆದ ಏಳು ವರ್ಷಗಳಲ್ಲಿ ಕನ್ನಡ ಭಾಷಾ ಅಭಿವೃದ್ಧಿಗಾಗಿ ಎಷ್ಟು ಅನುದಾನ ನೀಡಿದೆ ಎಂಬ ಮಾಹಿತಿ ಮುನ್ನೆಲೆಗೆ ಬಂದಿದೆ. ಇದೀಗ ಮತ್ತೊಂದು ಹಂತದ ಚರ್ಚೆಗೆ ಕಾರಣವಾಗುವ ಲಕ್ಷಣಗಳು ಗೋಚರಿಸಿವೆ.

ಕೇಂದ್ರ ಸರ್ಕಾರ ಕನ್ನಡ ಭಾಷಾ ಅಭಿವೃದ್ಧಿಗೆ ಅನುದಾನ ನೀಡುವಲ್ಲಿ ತಾರತಮ್ಯವೆಸಗಿದೆ ಎಂದು ರಾಜ್ಯಸಭಾ ಸದಸ್ಯ, ಕಾಂಗ್ರೆಸ್​​ನ ಜಿ.ಸಿ. ಚಂದ್ರಶೇಖರ್ ರಾಜ್ಯಸಭೆಯಲ್ಲಿ ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದಾರೆ. ಕನ್ನಡಕ್ಕೆ ಮಲತಾಯಿ ಧೋರಣೆ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರ ಕೂಡಲೇ ಸರಿಪಡಿಸಿಕೊಂಡು ಸೂಕ್ತ ಕ್ರಮಕೈಗೊಳ್ಳಬೇಕು ಎಂಬುದಾಗಿಯೂ ಅವರು ಮನವಿ ಮಾಡಿಕೊಂಡಿದ್ದಾರೆ.

ದೇಶದಲ್ಲಿ ಸಂಸ್ಕೃತ ಮಾತಾಡುವವರು ಕೇವಲ 28 ಸಾವಿರ ಮಂದಿಯಷ್ಟೇ ಇರುವುದು. ಅದಾಗ್ಯೂ ಸಂಸ್ಕೃತ ಭಾಷಾ ಅಭಿವೃದ್ಧಿಗೆ ಕೇಂದ್ರ ಸರ್ಕಾರ 640 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗಿದೆ. ಆದರೆ 2 ಸಾವಿರ ವರ್ಷಕ್ಕೂ ಅಧಿಕ ಇತಿಹಾಸ ಇರುವ ಕನ್ನಡವನ್ನು 6.5 ಕೋಟಿ ಜನರು ಮಾತನಾಡುತ್ತಿದ್ದಾರೆ. ಅದಾಗ್ಯೂ ಕನ್ನಡಕ್ಕೆ ಕೇಂದ್ರ ಸರ್ಕಾರ 7 ವರ್ಷದಲ್ಲಿ ಕೊಟ್ಟಿರುವುದು 8.39 ಕೋಟಿ ಮಾತ್ರ. ಈ ಮೂಲಕ ಕೇಂದ್ರ ಸರ್ಕಾರ ಕನ್ನಡದ ಬಗ್ಗೆ ಮಲತಾಯಿ ಧೋರಣೆ ವ್ಯಕ್ತಪಡಿಸಿದೆ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net