ಫೆಬ್ರವರಿ 16ರಂದು ರಾಜ್ಯ ಬಜೆಟ್​ ಮಂಡನೆ

VidhanaSoudha
Published on

ಬೆಂಗಳೂರು: ಮುಂದಿನ ಕೆಲವೇ ತಿಂಗಳುಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಮಾರ್ಚ್​ ತಿಂಗಳಲ್ಲಿ ನೀತಿ ಸಂಹಿತೆ ಘೋಷಣೆಯಾಗುವ ಸಾಧ್ಯತೆಯಿದ್ದು, ಈ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್​ ಸರ್ಕಾರ 2024-25ನೇ ಬಜೆಟ್​ಅನ್ನು ಫೆಬ್ರವರಿ 16ರಂದು ಮಂಡಿಸಲಿದೆ ಎಂದು ತಿಳಿದು ಬಂದಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ನಿರ್ಧರಿಸಲಾಗಿದ್ದು, ಫೆಬ್ರವರಿ 12 ರಿಂದ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಫೆಬ್ರವರಿ 12ರಂದು ಆರಂಭವಾಗಲಿರುವ ವಿಧಾನಮಂಡಲ ಅಧಿವೇಶನದ ಮೊದಲ ದಿನದಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಫೆಬ್ರವರಿ 16ರಂದು ಸಿಎಂ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್​ ಮಂಡಿಸಲಿದ್ದಾರೆ. ಗ್ಯಾರಂಟಿ ಯೋಜನೆಗಳಿಗೆ 75,000 ಕೋಟಿ ರೂ. ವೆಚ್ಚವಾಗಬಹುದು ಎಂದು ನಿರೀಕ್ಷಿಸಲಾಗಿದ್ದು, ಮತ್ತಷ್ಟು ಜನಪ್ರಿಯ ಯೋಜನಗೆಳನ್ನು ಘೋಷಿಸಲಾಗುತ್ತದೆಯೇ ಎಂದು ಕಾದು ನೋಡಬೇಕಿದೆ.

ಏಪ್ರಿಲ್​-ಮೇ ತಿಂಗಳಲ್ಲಿ ಲೋಕಸಭೆ ಚುಣಾವಣೆ ನಡೆಯಲಿದ್ದು, ಮಾರ್ಚ್​ ಮಧ್ಯಂತರ ಅಥವಾ ಕೊನೆಯ ವಾರದಲ್ಲಿ ಚುನಾವಣಾ ಆಯೋಗ ದಿನಾಂಕ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಈ ನಿಟ್ಟಿನಲ್ಲಿ ನೀತಿ ಸಂಹಿತೆ ಜಾರಿಯಾಗುವುದಕ್ಕೂ ಮುನ್ನವೇ ಬಜೆಟ್​ ಮಂಡಿಸಲು ರಾಜ್ಯ ಸರ್ಕಾರ ತಯಾರಿ ಆರಂಭಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net