More

    ಬಿಲ್ಲವ/ಈಡಿಗ, ಗಾಣಿಗ ಸಮುದಾಯಗಳಿಗೆ ಸರ್ಕಾರದ ಕೊಡುಗೆ; ನಿಗಮ ಸ್ಥಾಪನೆ ಬೇಡಿಕೆ ಈಡೇರಿಕೆ

    ಬೆಂಗಳೂರು: ಇನ್ನೇನು ಚುನಾವಣೆ ಬರಲಿದೆ ಎಂಬಷ್ಟರಲ್ಲಿ ಬಿಲ್ಲವ/ಈಡಿಗ, ಗಾಣಿಗ ಸಮುದಾಯಗಳ ಬಹುಕಾಲದ ಬೇಡಿಕೆ ಈಡೇರಿದೆ. ಎರಡೂ ಸಮುದಾಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ನಿಗಮ ಸ್ಥಾಪನೆಗೆ ಸರ್ಕಾರ ಆದೇಶ ಮಾಡಿದೆ.

    ಸರ್ಕಾರದ ಆದೇಶದಲ್ಲಿ ಹೊಸ ಕೆನೆಪದರ ಮತ್ತು ಭಾರತದ ಸಂವಿಧಾನದ ಅನುಚ್ಛೇದ-15(4)ರಂತೆ ವಿದ್ಯಾಸಂಸ್ಥೆಗಳಲ್ಲಿ ಪ್ರವೇಶ ಮತ್ತು 16(4)ರ ಮೇರೆಗೆ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲು ಹಿಂದುಳಿದ ವರ್ಗಗಳನ್ನು ಗುರುತಿಸಿ ಜಾತಿ ಪಟ್ಟಿ ಹೊರಡಿಸಲಾಗಿರುತ್ತದೆ. ಅದರನ್ವಯ ಸದರಿ ಜಾತಿ ಪಟ್ಟಿಯಲ್ಲಿ ಪ್ರವರ್ಗ 2’ಎ’ಯ ಕ್ರಮಸಂಖ್ಯೆ 4(a)ಯಿಂದ (z)ವರೆಗೆ ನಮೂದಾಗಿರುವ ಈಡಿಗ ಸೇರಿದಂತೆ ಒಟ್ಟು 26 ಜಾತಿಗಳಿಗೆ ಶೈಕ್ಷಣಿಕ ಹಾಗೂ ಉದ್ಯೋಗ ನೇಮಕಾತಿಗಳಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ಈಡಿಗ-ಬಿಲ್ಲವ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ಆದೇಶಿಸಿರುವುದಾಗಿ ತಿಳಿಸಿದೆ.

    ಅದೇ ರೀತಿ ಗಾಣಿಗ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ಹಿಂದುಳಿದ ವರ್ಗಗಳ ಮೀಸಲಾತಿ ಪಟ್ಟಿಯ ಕ್ರಮ ಸಂಖ್ಯೆ: 78 (ಎ)ಯಿಂದ(4)ರವರೆಗೆ ಬರುವ ಗಾಣಿಗ, ತೇಲಿ, ಗಾಂಡ್ಲ, ವನಿಯನ್ ಹಾಗೂ ಜೋತಿನಗರ, ಜ್ಯೋತಿನಗರ ವೈಶ್ಯ ಜಾತಿಗಳನ್ನು ಒಳಗೊಂಡಂತೆ ‘ಕರ್ನಾಟಕ ಗಾಣಿಗ ಅಭಿವೃದ್ಧಿ ನಿಗಮ’ ಸ್ಥಾಪಿಸಿ ಆದೇಶಿಸಿದೆ.

    ಅಳಿಯನನ್ನೇ ಅಪಹರಿಸಿ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿದ ಅತ್ತೆ; ಕಾಂಗ್ರೆಸ್ ನಾಯಕಿ ದಿವ್ಯಪ್ರಭಾ ಮತ್ತು ಕುಟುಂಬಸ್ಥರ ವಿರುದ್ಧ ಕೇಸ್​

    ಮಗುವಿಗೆ ಹಾಲು ಕುಡಿಸುತ್ತಿದ್ದ ಬಾಣಂತಿ ಕುಸಿದು ಬಿದ್ದು ಸಾವು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts