

ಬೆಂಗಳೂರು: ಬಿಜೆಪಿ ಸರ್ಕಾರದ ವಿರುದ್ಧ ಕೇಳಿ ಬಂದಿದ್ದ 40% ಕಮಿಷನ್ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನೇತೃತ್ವದ ಸರ್ಕಾರ ವಿಚಾರಣಾ ಆಯೋಗ ರಚಿಸಿದ್ದು, ತನಿಖೆ ಮಾಡಿಸಲು ಮುಂದಾಗಿದೆ.
ನ್ಯಾ.ನಾಗಮೋಹನ್ ದಾಸ್ ನೇತೃತ್ವದಲ್ಲಿ ವಿಚಾರಣಾ ಆಯೋಗ ರಚಿಸಿ ಒಳಾಡಳಿತ ಇಲಾಖೆಯಿಂದ ಆದೇಶ ಹೊರಡಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ತನಿಖಾ ಸಮಿತಿ ರಚಿಸಿದ್ದ ಸರ್ಕಾರ, ಹಿಂದಿನ ಆ ಆದೇಶವನ್ನು ರದ್ದುಗೊಳಿಸಿ, ವಿಚಾರಣಾ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ.
ಬಿಜೆಪಿ ಸರ್ಕಾರದ ಅವಧಿಯಲ್ಲಾದ ಕಾಮಗಾರಿಗಳು, ಟೆಂಡರ್, ಪ್ಯಾಕೇಜ್ಗಳು, ಪುನರ್ ಅಂದಾಜು, ಹೆಚ್ಚುವರಿ ಅಂದಾಜು, ಬಾಕಿ ಬಿಡುಗಡೆ ಬಗ್ಗೆ ಗುತ್ತಿಗೆದಾರ ಸಂಘದ ಅಧ್ಯಕ್ಷ ಕೆಂಪಣ್ಣ ಮಾಡಿದ ಆರೋಪಗಳ ತನಿಖೆಗೆ ನ್ಯಾ.ನಾಗಮೋಹನ್ ದಾಸ್ ನೇತೃತ್ವದ ವಿಚಾರಣಾ ಆಯೋಗದಿಂದ ಪರಿಶೀಲನೆ ನಡೆಯಲಿದೆ.