More

    ರಾಜ್ಯ ಸರ್ಕಾರಿ ನೌಕರರಿಗೆ ಗುಡ್​ ನ್ಯೂಸ್​; ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ

    ಬೆಂಗಳೂರು: ಮುಂದಿನ ಕೆಲವೇ ದಿನಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೆ ಈಗಾಗಲೇ ರಾಜಕೀಯ ಪಕ್ಷಗಳು ತಯಾರಿ ಆರಂಭಿಸಿದ್ದು, ಯಾವ ಕ್ಷಣದಲ್ಲಿ ಬೇಕಾದರೂ ದಿನಾಂಕ ಘೋಷಿಸುವ ಸಾಧ್ಯತೆ ದಟ್ಟವಾಗಿದೆ. ಆದರೆ, ಈ ನಡುವೆ ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್​ ಸರ್ಕಾರ ಸಿಹಿ ಸುದ್ದಿ ನೀಡಿದೆ.

    ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಸಿಎಂ ಸಿದ್ದರಾಮಯ್ಯ, ರಾಜ್ಯ ಸರ್ಕಾರಿ ನೌಕರರುಗಳಿಗೆ 1ನೇ ಜನವರಿ 2024 ರಿಂದ ಜಾರಿಗೆ ಬರುವಂತೆ ತುಟ್ಟಿಭತ್ಯೆಯ ದರಗಳನ್ನು ಪ್ರಸ್ತುತ ಮೂಲ ವೇತನದ ಶೇ. 38.75 ರಿಂದ ಶೇ. 42.5 ಗೆ ಹೆಚ್ಚಿಸಿ ಮಂಜೂರು ಮಾಡಲು ನಮ್ಮ ಸರ್ಕಾರವು ಹರ್ಷಿಸುತ್ತದೆ ಎಂದು ತಿಳಿಸಿದ್ದಾರೆ.

    ಸರ್ಕಾರ ಮತ್ತು ಜನರ ನಡುವಿನ ಕೊಂಡಿಯಂತೆ ಕೆಲಸ ಮಾಡುತ್ತಿರುವ, ಸರ್ಕಾರದ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನದಲ್ಲಿ ನಮ್ಮ ಜೊತೆ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ನೌಕರರ ಜೊತೆ ನಾವಿದ್ದೇವೆ. ಸರ್ಕಾರಿ ನೌಕರರ ಹಿತಕಾಯಲು ನಾವು ಸದಾ ಬದ್ಧರಿದ್ದೇವೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದ್ದಾರೆ.

    ಇದನ್ನೂ ಓದಿ: VIDEO| ಮಹಾಶಿವರಾತ್ರಿಯಂದು ಅಪ್ಪು ನೆನೆದು ಭಾವುಕರಾದ ಸದ್ಗುರು

    ಸದ್ಯ ರಾಜ್ಯ ಸರ್ಕಾರಿ ನೌಕರರಿಗೆ ಶೇ.38.75ರಷ್ಟು ತುಟ್ಟಿ ಭತ್ಯೆ ಇತ್ತು. ಅದನ್ನು ಈಗ ಶೇ.42.5ಕ್ಕೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇದರಿಂದ ರಾಜ್ಯದ ಬೊಕ್ಕಸಕ್ಕೆ ಪ್ರತಿ ವರ್ಷ 1792.71 ಕೋಟಿ ರೂ. ಹೆಚ್ಚುವರಿ ಹೊರೆಯಾಗಲಿದೆ ಎಂದು ಅಂದಾಜಿಸಲಾಗಿದೆ.

    ಕೆಲ ದಿನಗಳ ಹಿಂದಷ್ಟೇ ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರದ ಮುಂದೆ ಶೇ.4ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಬೇಡಿಕೆ ಇಟ್ಟಿತ್ತು. ಕೇಂದ್ರ ಸರ್ಕಾರವು ಶೇ.4ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿ, ಜನವರಿ 1ರಂತೆ ಪೂರ್ವಾನ್ವಯವಾಗುವಂತೆ ಆದೇಶ ಹೊರಡಿಸಿತ್ತು. ಅದೇ ರೀತಿ ಕರ್ನಾಟಕದಲ್ಲೂ ತುಟ್ಟಿ ಭತ್ಯೆಯನ್ನು ಜನವರಿ 1ರಿಂದ ಪೂರ್ವಾನ್ವಯವಾಗುವಂತೆ ಹೆಚ್ಚಿಸಲು ರಾಜ್ಯ ಸರ್ಕಾರಕ್ಕೆ ನೌಕರರ ಸಂಘ ಮನವಿ ಪತ್ರ ಸಲ್ಲಿಸಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts