More

    ತೆರಿಗೆ ಕಟ್ಟೋರ್ಗೇ ‘ಟ್ಯಾಕ್ಸು’: ಕೈಕೊಟ್ಟ ಗ್ಯಾರಂಟಿ; ಐಟಿ-ಜಿಎಸ್​ಟಿ ಪಾವತಿಸುವವರಿಗಿಲ್ಲ ಗೃಹಲಕ್ಷ್ಮಿ!

    ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಐದು ಗ್ಯಾರಂಟಿಗಳ ಪೈಕಿ ಒಂದಾಗಿರುವ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆ ‘ತೆರಿಗೆ ಕಟ್ಟೋರ್ಗೇ ಟ್ಯಾಕ್ಸು’ ಎಂಬಂತಾಗಿದೆ.

    ಮಾತ್ರವಲ್ಲ, ಪ್ರತಿ ಕುಟುಂಬದ ಒಬ್ಬಳು ಗೃಹಿಣಿಗೆ 2 ಸಾವಿರ ಗ್ಯಾರಂಟಿ ಎಂದಿರುವ ಕಾಂಗ್ರೆಸ್, ಈಗ ಪತಿ-ಪತ್ನಿ ಇಬ್ಬರಲ್ಲಿ ಯಾರಾದರೂ ಒಬ್ಬರು ಐಟಿ-ಜಿಎಸ್​ಟಿ ಪಾವತಿಸುತ್ತಿದ್ದರೆ ‘ಗೃಹಲಕ್ಷ್ಮಿ’ ಇಲ್ಲ ಎನ್ನುವ ಮೂಲಕ ನಂಬಿಸಿ ಕೈಕೊಟ್ಟಿದೆ.

    ಮೇ 5ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನೀಡಿದ ತಾತ್ವಿಕ ಅನುಮೋದನೆ ಮೇರೆಗೆ, ಕರ್ನಾಟಕ ರಾಜ್ಯದ ಕುಟುಂಬದ ಯಜಮಾನಿ ಮಹಿಳೆಗೆ ಪ್ರತಿ ತಿಂಗಳು 2 ಸಾವಿರ ರೂ. ನೀಡುವ “ಗೃಹಲಕ್ಷ್ಮಿ ಯೋಜನೆ”ಯನ್ನು ಜಾರಿಗೆ ತರಲು ತಾತ್ವಿಕ ಅನುಮೋದನೆ ನೀಡಿ ಆದೇಶಿಸಿ, ವಿವರವಾದ ರೂಪುರೇಷೆ ಹಾಗೂ ಯೋಜನೆಯ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದೆಂದು ತಿಳಿಸಲಾಗಿತ್ತು. ಅದರಂತೆ ಇಂದು ಮಾರ್ಗಸೂಚಿ ಒಳಗೊಂಡ ಆದೇಶವನ್ನು ಸರ್ಕಾರ ಪ್ರಕಟಿಸಿದೆ.

    ಇದನ್ನೂ ಓದಿ: ಇನ್ನೈದು ವರ್ಷಗಳಲ್ಲಿ ರಾಜ್ಯದ 4 ಕಡೆ ಹಜ್ ಭವನ ನಿರ್ಮಾಣ: ಸಚಿವ ಜಮೀರ್ ಅಹ್ಮದ್

    ಆದೇಶದಲ್ಲಿನ ಮಾರ್ಗಸೂಚಿಗಳು ಇಂತಿವೆ..

    1. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯು ಈ ಯೋಜನೆಯ ಅರ್ಹ ಫಲಾನುಭವಿ ಆಗಿರುತ್ತಾರೆ.

    2. ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ, ಒಂದು ಮಹಿಳೆಗೆ ಮಾತ್ರ ಯೋಜನೆ ಅನ್ವಯಿಸತಕ್ಕದ್ದು.

    3. ಈ ಯೋಜನೆಯ ಫಲಾನುಭವಿಗಳು 2023ರ ಜೂನ್ 15ರಿಂದ ಜುಲೈ 15ರವರೆಗೆ ಅರ್ಜಿ ಸಲ್ಲಿಸುವುದು. ನಂತರ ಜುಲೈ 15ರಿಂದ ಫಲಾನುಭವಿಗಳ ಆಯ್ಕೆ ಮಾಡುವುದು. ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್ 15ರಂದು ಅವರ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡುವುದು.

    4. ಅರ್ಜಿದಾರರು ಸೇವಾ ಸಿಂಧು ಪೋರ್ಟಲ್ ಮೂಲಕವಾಗಲಿ ಅಥವಾ ಭೌತಿಕವಾಗಿಯಾಗಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸತಕ್ಕದ್ದು.

    ಇದನ್ನೂ ಓದಿ: ಪ್ರತಿ ಮನೆಗೂ ಉಚಿತ ವಿದ್ಯುತ್, ಗೃಹಜ್ಯೋತಿ ಯೋಜನೆ ಜಾರಿಗೂ ಆದೇಶ: ಷರತ್ತುಗಳ ವಿವರ ಇಲ್ಲಿದೆ..

    5. ಅರ್ಜಿದಾರರು ಸಲ್ಲಿಸುವ ಪೂರ್ಣಪ್ರಮಾಣದ ಅರ್ಜಿಯಲ್ಲಿನ ಸ್ವಯಂಘೋಷಣೆ ಆಧಾರದ ಮೇಲೆ ಮಂಜೂರಾತಿ ನೀಡುವುದು. ಅರ್ಜಿಯಲ್ಲಿನ ಅಂಶಗಳ ಬಗ್ಗೆ ತದನಂತರ ಪರಿಶೀಲನೆ ಮಾಡುವುದು. ತಪ್ಪು ಮಾಹಿತಿ ನೀಡಿ ಸೌಲಭ್ಯ ಪಡೆದಿರುವುದು ಕಂಡುಬಂದಲ್ಲಿ, ಈಗಾಗಲೇ ಪಾವತಿಸಲಾಗಿರುವ ಹಣವನ್ನು ಅರ್ಜಿದಾರರಿಂದ ವಸೂಲು ಮಾಡುವುದು ಮತ್ತು ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದು.

    6. ಈ ಯೋಜನೆಯ ಸೌಲಭ್ಯ ಪಡೆಯಲು ಫಲಾನುಭವಿಯ ಬ್ಯಾಂಕ್ ಖಾತೆ ಮತ್ತು ಆಧಾರ ಕಾರ್ಡ್​​ಗಳನ್ನು ಜೋಡಣೆ ಮಾಡುವುದು.

    7. ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿದಾರರಾಗಿದ್ದಲ್ಲಿ ಅಥವಾ ಕುಟುಂಬದ ಯಜಮಾನಿ ಅಥವಾ ಯಜಮಾನಿಯ ಪತಿ ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅಂಥವರಿಗೆ ಈ ಯೋಜನೆ ಅನ್ವಯಿಸುವುದಿಲ್ಲ.

    ನಾಚಿಕೆ-ಅವಮಾನ ಸಹಿಸಿಕೊಂಡು ಬಯಲಲ್ಲೇ ದೇಹದ ಒತ್ತಡ ನಿವಾರಿಸಿಕೊಂಡೆ: ಟಾಯ್ಲೆಟ್ ಇರದೆ ಪಟ್ಟ ಕಷ್ಟದ ಬಗ್ಗೆ ರಾಷ್ಟ್ರಪತಿಗೇ ಪತ್ರ ಬರೆದ ಮಹಿಳೆ

    ವಿಂಗ್ ಹೆಸರಲ್ಲಿ ಅಮಾಯಕ ಹಿಂದು ಹುಡುಗರನ್ನು ತಡೆದರೆ ಪರಿಣಾಮ ನೆಟ್ಟಗಿರಲ್ಲ: ವಜ್ರದೇಹಿ ಸ್ವಾಮೀಜಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts