More

    ಮೇಕೆದಾಟು ಪಾದಯಾತ್ರೆ ತಡೆಗೆ ಆದೇಶ; ಉಲ್ಲಂಘಿಸಿದರೆ ಕಾನೂನುಕ್ರಮ ಜಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ

    ಬೆಂಗಳೂರು: ರಾಜ್ಯದಲ್ಲಿ ಕರೊನಾ ಹಾವಳಿ ಇರುವಾಗ ಕರೊನಾ ನಿಯಂತ್ರಣ ನಿಯಮಗಳನ್ನೂ ಮೀರಿ ಕಾಂಗ್ರೆಸ್ ಪಕ್ಷ ಮೇಕೆದಾಟು ಪಾದಯಾತ್ರೆ ಹಮ್ಮಿಕೊಂಡಿದ್ದು, ಈಗಾಗಲೇ ನಾಲ್ಕು ದಿನಗಳ ಕಾಲ ನಡೆದಿದೆ. ಅದಾಗ್ಯೂ ಇದುವರೆಗೆ ಯಾವುದೇ ಕ್ರಮಕೈಗೊಳ್ಳದೆ ಸುಮ್ಮನಿದ್ದ ಸರ್ಕಾರ ಇದೀಗ ಕಠಿಣ ಕ್ರಮ ಜರುಗಿಸುವ ಆದೇಶ ಹೊರಡಿಸಿದೆ.

    ಮೇಕೆದಾಟು ಯೋಜನೆಗೆ ಆಗ್ರಹಿಸಿ ಕೆಪಿಸಿಸಿ ಹಮ್ಮಿಕೊಂಡಿರುವ ಪಾದಯಾತ್ರೆ ತಡೆಯಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್​, ಬುಧವಾರ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ. ಇದರ ಬೆನ್ನಿಗೇ ಚುರುಕುಗೊಂಡಿರುವ ರಾಜ್ಯ ಸರ್ಕಾರ ಕಠಿಣ ಕ್ರಮ ಜರುಗಿಸಲು ಮುಂದಾಗಿದೆ.

    ರಾಜ್ಯದಲ್ಲಿ ಕರೊನಾ ಪ್ರಕರಣಗಳು ತೀವ್ರಗತಿಯಲ್ಲಿ ಏರುತ್ತಿದ್ದು, ಅದನ್ನು ನಿಯಂತ್ರಿಸಲು ಸರ್ಕಾರ ಸಾಕಷ್ಟು ಪ್ರಯತ್ನ ನಡೆಸುತ್ತಿದೆ. ಕರೊನಾ ಪರಿಸ್ಥಿತಿ ನಿಭಾಯಿಸಲು ಒಂದಷ್ಟು ನಿರ್ಬಂಧಗಳನ್ನೂ ವಿಧಿಸಲಾಗಿದೆ. ಅದಾಗ್ಯೂ ನೀರಿನ ವಿಚಾರವಾಗಿ ಪಾದಯಾತ್ರೆ ನಡೆಸಲಾಗುತ್ತಿದೆ. ಇದರಿಂದ ಕರೊನಾ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಇಂಥ ಯಾವುದೇ ಪಾದಯಾತ್ರೆಗೆ ಅವಕಾಶ ಕೊಡಬಾರದು ಎಂದು ಸರ್ಕಾರ ಆದೇಶ ಹೊರಡಿಸಿದೆ.

    ರಾಮನಗರ ಸೇರಿ ಕರ್ನಾಟಕದ ಯಾವುದೇ ಜಿಲ್ಲೆಯಲ್ಲಿ ಜನರು ಇಂಥ ಪಾದಯಾತ್ರೆಗಳಲ್ಲಿ ತೊಡಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ನಿಯಮ ಉಲ್ಲಂಘಿಸಿದರೆ ವಿಪತ್ತು ನಿರ್ವಹಣಾ ಕಾಯ್ದೆ 2005ರ ಅನ್ವಯ ಸೂಕ್ತ ಕ್ರಮ ಜರುಗಿಸಬೇಕು ಎಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ಪೊಲೀಸ್ ಕಮಿಷನರ್​ಗಳು ಕ್ರಮಕೈಗೊಳ್ಳಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ. ಸಾರಿಗೆ ಆಯುಕ್ತರು ಜಿಲ್ಲಾಡಳಿತ ಹಾಗೂ ಪೊಲೀಸ್ ವರಿಷ್ಠರಿಗೆ ಈ ವಿಷಯವಾಗಿ ಸಹಕರಿಸಬೇಕು ಎಂಬುದಾಗಿಯೂ ಆದೇಶದಲ್ಲಿ ತಿಳಿಸಲಾಗಿದೆ.

    ಇದು ಹಾಟೆಸ್ಟ್ ಸೀರೆ!; ಇದನ್ನು ಬೆಂಕಿಪೊಟ್ಟಣದೊಳಗಿಟ್ಟು ಒಯ್ಯಬಹುದು..!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts