ಬೆಂಗಳೂರು: ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಅರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಸಿಐಡಿ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಆದೇಶಿಸಿದೆ.
ಈ ಕುರಿತು ತುಮಕೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಲಾಗಿದ್ದು, ತನಿಖಾ ವರದಿ ಬಂದ ನಂತರ ಸತ್ಯಾಂಶ ಹೊರಬೀಳಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರು ಭಾಗಿಯಾಗಿದ್ದಾರೆ. ಯಾರೆ ಕೈವಾಡವಿದೆ ಎಂಬುದು ತನಿಖೆ ನಂತರ ಗೊತ್ತಾಗಲಿದೆ.
ಇದನ್ನೂ ಓದಿ: ಉತ್ಪಾದನೆಯೇ ಅಭಿವೃದ್ಧಿಯ ಅಂತಿಮ ಕೀಲಿಕೈ
ಸಚಿವ ಶರಣಪ್ರಕಾಶ ಪಾಟೀಲ್ ಅವರ ವಿರುದ್ಧ ಕೆಲವರು ಆರೋಪ ಮಾಡುತ್ತಿದ್ದಾರೆ. ಅದರ ಬಗ್ಗೆ ಪರಿಶೀಲನೆ ನಡೆಸಿ ಆ ನಂತರ ಖಚಿತ ಪಡಿಸಿಕೊಳ್ಳಬೇಕಿದೆ. ಆರೋಪ ಮಾಡಿರುವವರ ಹೇಳಿಕೆಯನ್ನು ಪಡೆದು ಪರಿಶೀಲನೆ ನಡೆಸಬೇಕಿದ್ದು, ಈ ನಿಟ್ಟಿನಲ್ಲಿ ಸಿಐಡಿ ತನಿಖೆಗೆ ಆದೇಶಿಸಲಾಗಿದೆ.
ಎಲ್ಲಾ ಆಯಾಮದಲ್ಲೂ ಸಿಐಡಿ ತನಿಖೆ ನಡೆಸಲಿದೆ. ತನಿಖಾ ವರದಿ ಬಂದ ನಂತರ ಸತ್ಯಾಂಶ ಹೊರಬರಲಿದೆ. ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಇಂತಹ ವಿಚಾರಗಳಲ್ಲಿ ಎಲ್ಲಾ ಆರೋಪಗಳಿಗು ಉತ್ತರ ಕೊಡಲು ಸಾಧ್ಯವಿಲ್ಲ ಎಂದು ಗೃಹಸಚಿವ ಪರಮೇಶ್ವರ್ ಹೇಳಿದ್ದಾರೆ.