ಯುದ್ಧಪೀಡಿತ ಇಸ್ರೇಲ್​ನಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸಿದ ಸರ್ಕಾರ: ಇಲ್ಲಿದೆ ಮಾಹಿತಿ

Israel Helpline by GoK
Published on

ಬೆಂಗಳೂರು: ಇಸ್ರೇಲ್​ನಲ್ಲಿ ಮೊನ್ನೆ ಬೆಳ್ಳಂಬೆಳಗ್ಗೆ ಹಮಾಸ್ ಉಗ್ರರಿಂದ ನಡೆದ ರಣಭೀಕರ ದಾಳಿಗೆ ಯುದ್ಧೋನ್ಮಾದ ಪರಿಸ್ಥಿತಿ ಉಂಟಾಗಿದೆ. ಎರಡೂ ಕಡೆಯವರು ಸೇರಿ ಸಾವಿರಾರು ಮಂದಿ ಬಲಿಯಾಗಿದ್ದರೂ ರಣರಂಗವಾಗಿರುವ ಇಸ್ರೇಲ್ ಶಾಂತವಾಗಿಲ್ಲ. ಯುದ್ಧ ಪರಿಸ್ಥಿತಿ ಇನ್ನೂ ಮುಂದುವರಿದಿದೆ.

ಹೀಗೆ ರಣಗಂಭೀರ ಪರಿಸ್ಥಿತಿಯಲ್ಲಿರುವ ಇಸ್ರೇಲ್​ನಲ್ಲಿ ಕನ್ನಡಿಗರನೇಕರು ಸಿಲುಕಿದ್ದಾರೆ ಎನ್ನಲಾಗಿದ್ದು, ಅವರ ನೆರವಿಗಾಗಿ ಕರ್ನಾಟಕ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಅಲ್ಲದೆ ಸರ್ಕಾರದಿಂದ ಹೆಲ್ಪ್​ಲೈನ್ ಆರಂಭಿಸಿದ್ದಾಗಿಯೂ ತಿಳಿಸಿದ್ದಾರೆ.

ಸಹಾಯವಾಣಿ ಸಂಖ್ಯೆಗಳು

  • 080 22340676
  • 080 22253707

ಯುದ್ಧಪೀಡಿತ ಇಸ್ರೇಲ್‌ನಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗಾಗಿ ನಾವು ಸಹಾಯವಾಣಿಯನ್ನು ತೆರೆದಿದ್ದೇವೆ. ಇಸ್ರೇಲ್‌ನಲ್ಲಿರುವ ಕುಟುಂಬ ಸದಸ್ಯರು ನಿಮ್ಮ ಸಂಪರ್ಕಕ್ಕೆ ಸಿಗದಿದ್ದಲ್ಲಿ ಅಥವಾ ಯುದ್ಧದಿಂದಾಗಿ ಸಂಕಷ್ಟದಲ್ಲಿರುವ ನಿಮ್ಮವರಿಗೆ ತಕ್ಷಣದ ನೆರವಿನ ಅಗತ್ಯವಿದ್ದಲ್ಲಿ ಕೂಡಲೇ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ, ಅಗತ್ಯ ನೆರವು ಪಡೆಯಬಹುದಾಗಿದೆ ಎಂದು ಸಿಎಂ ಹೇಳಿದ್ದಾರೆ.

ಅಲ್ಲದೆ ಜಗತ್ತಿನ ಯಾವುದೇ ಮೂಲೆಯಲ್ಲಿರುವ ಪ್ರತಿಯೊಬ್ಬ ಕನ್ನಡಿಗನ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂಬ ಭರವಸೆಯನ್ನೂ ನೀಡಿದ್ದು, ಸಹಾಯವಾಣಿಯ ಮಾಹಿತಿಯನ್ನು ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net