More

    ಎಲ್ಲಾ ಶಾಲೆಗಳಲ್ಲಿ ನಾಡಗೀತೆ ಹಾಡುವುದು ಕಡ್ಡಾಯ; ತಿದ್ದುಪಡಿ ಆದೇಶ ಹೊರಡಿಸಿದ ಸರ್ಕಾರ

    ಬೆಂಗಳೂರು: ಖಾಸಗಿ ಶಾಲೆಗಳಿಗೆ ನಾಡಗೀತೆ ಹಾಡುವುದಕ್ಕೆ ವಿನಾಯಿತಿ ನೀಡಿದ ಸರ್ಕಾರ,  ಸರ್ಕಾರಿ ಶಾಲೆಗಳು ಮತ್ತು ಅನುದಾನಿತ ಶಾಲೆಗಳಲ್ಲಿ  ಮಾತ್ರ ನಾಡಗೀತೆ ಹಾಡಬೇಕು ಎಂದು ಹೊರಡಿಸಿದ ಆದೇಶಕ್ಕೆ ಸರ್ಕಾರ ತಿದ್ದುಪಡಿ ತಂದಿದೆ.

    ಆದೇಶ ಪ್ರತಿ ಹೊರ ಬೀಳುತ್ತಿದ್ದಂತೆ ಸಾರ್ವಜನಿಕರು, ವಿಪಕ್ಷಗಳ ನಾಯಕರು ಸರ್ಕಾರ ನಡೆಗೆ ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಕೂಡಲೇ ಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಿದ್ದರು. ಇದೀಗ ವಿವಾದ ಭುಗಿಲೆದ್ದ ಬೆನ್ನಲ್ಲೇ ಸರ್ಕಾರ ಆದೇಶಕ್ಕೆ ತಿದ್ದುಪಡಿ ತರುವ ಮೂಲಕ ಶಾಂತಗೊಳಿಸುವ ಪ್ರಯತ್ನ ಮಾಡಿದೆ.

    order copy

    ಇದನ್ನೂ ಓದಿ: ಸಿನಿಮಾ ಗೆದ್ದಿದೆ ಆ ಖುಷಿಯಲ್ಲಿ ಏನೇನೋ ಮಾತನಾಡುತ್ತಿದ್ದಾರೆ; ದರ್ಶನ್​ ಹೇಳಿಕೆಗೆ ಉಮಾಪತಿ ಟಾಂಗ್​

    ತಿದ್ದುಪಡಿ ಆದೇಶದಲ್ಲಿ ಏನಿದೆ?

    ಎಲ್ಲಾ ಶಾಲೆಗಳಲ್ಲಿ (ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ) ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡುವುದು ಎಂದು ತಿದ್ದಿ ಓದಿಕೊಳ್ಳತಕ್ಕದ್ದು ಎಂಬುದಾಗಿ ತಿದ್ದುಪಡಿ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

    ಆದೇ ರೀತಿ ಸರ್ಕಾರದ ಇಲಾಖೆಗಳು ಹಾಗೂ ನಿಗಮ, ಮಂಡಳಿ, ಪಾಧ್ರಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ಅಧಿಕೃತ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರಾರಂಭದಲ್ಲಿ ನಾಡಗೀತೆಯನ್ನು ಹಾಡಬೇಕೆಂದು ಸರ್ಕಾರ ಹೊರಡಿಸಿರುವ ತಿದ್ದುಪಡಿ ಆದೇಶದಲ್ಲಿ ತಿಳಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts