ಬಿಬಿಎಂಪಿ ವಾರ್ಡ್​ ಪುನರ್​ವಿಂಗಡಣೆ; ಸಮಿತಿ ರಚಿಸಿ ಸರ್ಕಾರ ಆದೇಶ

BBMP
Published on

ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನ ಸ್ಥಳೀಯ ಆಡಳಿತ ಸಂಸ್ಥೆಯಾದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ(BBMP) ವಾರ್ಡ್​ಗಳ ಮರುವಿಂಗಡಣೆಗೆ ರಾಜ್ಯ ಸರ್ಕಾರದಿಂದ ಸಮಿತಿ ಒಂದನ್ನು ರಚಿಸಿ ಆದೇಶ ಹೊರಡಿಸಲಾಗಿದೆ.

ಹೈಕೋರ್ಟ್​ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಲಾಗಿದ್ದು, 12 ವಾರಗಳ ಒಳಗಾಗಿ ವಾರ್ಡ್​ ಮರುವಿಂಗಡಣಾ ವರದಿಯನ್ನು ಸಲ್ಲಿಸುವಂತೆ ಸಮಿತಿಗೆ ಸೂಚಿಸಲಾಗಿದೆ.

2020 ಸೆಪ್ಟೆಂಬರ್​ ತಿಂಗಳಲ್ಲಿ ಬಿಬಿಎಂಪಿ ಸದಸ್ಯರ ಅಧಿಕಾರ ಅವಧಿ ಮುಗಿದಿದ್ದು, ಚುನಾವಣೆ ನಡೆಸುವ ದೃಷ್ಟಿಯಿಂದ 198 ವಾರ್ಡ್​​ಗಳನ್ನು ಪುನರ್​ ವಿಂಗಡಣೆ ಮಾಡಲಾಗಿತ್ತು. ಹಿಂದೆ ಇದ್ದ ಬಿಜೆಪಿ ಸರ್ಕಾರ ಬಿಬಿಎಂಪಿ ವ್ಯಾಪ್ತಿಯನ್ನು 243 ವಾರ್ಡ್​ಗಳಿಗೆ ಹೆಚ್ಚಿಸಿತ್ತು. ಬಿಜೆಪಿ ಸರ್ಕಾರ ಮಾಡಿಸಿರುವ ವಾರ್ಡ್​ ಮರುವಿಂಗಡಣೆ ಸೂಕ್ತವಾಗಿಲ್ಲ ಎಂದು ಆರೋಪಿಸಿ ಮಾಜಿ ಸದಸ್ಯರು ಕೋರ್ಟ್​ ಮೊರೆ ಹೋಗಿದ್ದರು.

VidhanaSoudha

ಬಿಬಿಎಂಪಿ ಚುನಾವಣೆ ಹಾಗೂ ವಾರ್ಡ್‌ ಮರುವಿಂಗಡಣೆ ಕುರಿತಂತೆ ವಿಚಾರಣೆ ನಡೆಸಿದ ಹೈಕೋರ್ಟ್‌ಗೆ ಸರ್ಕಾರವು ತಪ್ಪುಗಳನ್ನು ಸರಿಪಡಿಸಿ 12 ವಾರಗಳಲ್ಲಿ ಹೊಸದಾಗಿ ವಾರ್ಡ್‌ಗಳ ಮರುವಿಂಗಡಣೆ ಮಾಡುವಂತೆ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಕಾಂಗ್ರೆಸ್‌ ಸರ್ಕಾರವು ಬಿಬಿಎಂಪಿ ವಾರ್ಡ್‌ಗಳ ಮರುವಿಂಗಡಣೆಗೆ ಆಯೋಗವನ್ನು ರಚಿಸಿ ಆದೇಶ ಹೊರಡಿಸಿದೆ. 

ಸಮಿತಿ ಮುಖ್ಯಸ್ಥರಾಗಿ ಬಿಬಿಎಂಪಿ ಆಯುಕ್ತ ತುಷಾರ್​ ಗಿರಿನಾಥ್​, ಸದಸ್ಯರಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ, ಬಿಡಿಎ ಆಯುಕ್ತರರು ಹಾಗೂ ಬಿಬಿಎಂಪಿ ಕಂದಾಯ ಇಲಾಖೆಯ ವಿಶೇಷ ಆಯುಕ್ತರು ಸಮಿತಿಯಲ್ಲಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net