ಗೋಕಾಕ: ಗಾಂಜಾ ಮಾರುತ್ತಿದ್ದ ಒಬ್ಬನ ಬಂಧನ

ಗೋಕಾಕ: ಖಚಿತ ಮಾಹಿತಿ ಮೇರೆಗೆ ಗಾಂಜಾ ಮಾರುತ್ತಿದ್ದ ಗುಂಪೊಂದರ ಮೇಲೆ ಶುಕ್ರವಾರ ದಾಳಿ ನಡೆಸಿರುವ ಗೋಕಾಕ ಪೊಲೀಸರು, ಒಬ್ಬನನ್ನು ಬಂಧಿಸಿ, 700ಗ್ರಾಂ ಗಾಂಜಾ,ಒಂದು ಸ್ಕೂಟಿಯನ್ನು ವಶಪಡಿಸಿಕೊಂಡಿದ್ದಾರೆ.

ನಗರದ ವಿವಿಧ ಪ್ರದೇಶಗಳಲ್ಲಿ ಯುವಕರು ಗಾಂಜಾ ಚಟಕ್ಕೆ ಬಲಿಯಾದ ಮಾಹಿತಿ ಜಾಡುಹಿಡಿದ ಪೊಲೀಸರು ಗಾಂಜಾ ವಾಹನ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ. ವಡ್ಡರಗಲ್ಲಿಯ ಇಸ್ಮಾಯಿಲ್ ಶಾಬಾಷಖಾನ್ ಎಂಬುವವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಡಿಎಸ್‌ಪಿ ಡಿ.ಟಿ.ಪ್ರಭು ಮಾರ್ಗದರ್ಶನದಲ್ಲಿ ಪಿಎಸ್‌ಐ ಶ್ರೀಶೈಲ ಬ್ಯಾಕೂಡ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿದರು. ಗೋಕಾಕ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *