

ಉಳ್ಳಾಲ: ಬಿಹಾರದ ಸಿವಾನ್ ಮಹಾವೀರಿ ಸರಸ್ವತಿ ವಿದ್ಯಾ ಮಂದಿರದಲ್ಲಿ ಅ.1ರಿಂದ 5ರವರೆಗೆ ನಡೆದ ವಿದ್ಯಾಭಾರತಿ ರಾಷ್ಟ್ರೀಯಮಟ್ಟದ ಟೇಕ್ವಾಂಡೋ ಸ್ಪರ್ಧೆಯಲ್ಲಿ ತಲಪಾಡಿ ಶಾರದಾ ವಿದ್ಯಾನಿಕೇತನ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಾದ ವಿಷ್ಣು ವಿಶ್ವನಾಥ್ ಚಿನ್ನದ ಪದಕ, ಗಗನ್ ಆನಂದ್ ಟಿ. ಕಂಚಿನ ಪದಕ ಗೆದ್ದು ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾಗೆ ಅರ್ಹತೆ ಪಡೆದಿದ್ದಾರೆ.
ಸಾಧಕ ವಿದ್ಯಾರ್ಥಿಗಳನ್ನು ಶಾರದಾ ಗ್ರೂಪ್ ಆಫ್ ಇನ್‌ಸ್ಟಿಟ್ಯೂಶನ್ಸ್ ಮತ್ತು ವ್ಯಾನೇಜ್‌ಮೆಂಟ್ ತಂಡದ ಅಧ್ಯಕ್ಷ ಡಾ.ಎಂ.ಬಿ.ಪುರಾಣಿಕ್ ಅಭಿನಂದಿಸಿ, ಮುಂಬರುವ ಎಸ್‌ಜಿಎಫ್‌ಐ ಚಾಂಪಿಯನ್‌ಷಿಪ್‌ನಲ್ಲಿ ಯಶಸ್ಸಿಗೆ ಶುಭ ಹಾರೈಸಿದ್ದಾರೆ.