25.1 C
Bangalore
Friday, December 6, 2019

ಚಿನ್ನಾಭರಣ ಕಳವು ಕುಖ್ಯಾತ ಆರೋಪಿ ಸೆರೆ

Latest News

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

ಮಲಗಿದ ಮೇಲೆ ಸಂಪೂರ್ಣ ಸುಖ ನಿದ್ದೆಗೆ ಇಲ್ಲಿವೆ ಕೆಲ ಟಿಪ್ಸ್​ಗಳು

ಸಂಪುರ್ಣ ಎಂಟು ತಾಸು ನಿದ್ದೆ..! - ನಿದ್ದೆ ಮಾಡಿದ ಮೇಲೆ ಮಧ್ಯೆ ಯಾವುದಕ್ಕೂ ಅಂದರೆ ಬಾತ್​ರೂಂಗೆ ಹೋಗಲು, ನೀರು ಕುಡಿಯಲು, ನಿಮ್ಮ ಮೊಬೈಲ್​ ಚೆಕ್​ ಮಾಡಲು...

ಗೊರಗುದ್ದಿ ಶಾಲೆ ಗೋಳು ಕೇಳೋರಿಲ್ಲ

|ಬೆಳ್ಳೆಪ್ಪ ಮ.ದಳವಾಯಿ ಕಡಬಿ ಸರ್ಕಾರ ಸರ್ವಶಿಕ್ಷಣ ಅಭಿಯಾನದ ಹಲವು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ. ಅಲ್ಲದೆ ಆ ಯೋಜನೆಗಳಿಗೆ ಸರ್ಕಾರ ಕೋಟ್ಯಂತರ ರೂ.ಹಣ ಖರ್ಚು...

ಅತ್ಯಾಚಾರ ಆರೋಪಿಗಳ ಎನ್​ಕೌಂಟರ್​ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ಪೊಲೀಸ್​ ಆಯುಕ್ತ ವಿಶ್ವನಾಥ್​ ಸಜ್ಜನರ್​

ಹೈದರಾಬಾದ್​: ಪಶುವೈದ್ಯೆಯ ಮೇಲೆ ಅತ್ಯಾಚಾರವೆಸಗಿ, ಕೊಲೆಗೈದು ಮೃತದೇಹಕ್ಕೆ ಬೆಂಕಿಯಿಟ್ಟು ಕ್ರೂರತ್ವ ಮೆರೆದಿದ್ದ ನಾಲ್ವರು ಆರೋಪಿಗಳನ್ನು ಹೈದರಾಬಾದ್​ ಪೊಲೀಸರು ಶುಕ್ರವಾರ ಬೆಳ್ಳಂಬೆಳಗ್ಗೆ ಎನ್​ಕೌಂಟರ್​ ಮೂಲಕ...

<3.50 ಲಕ್ಷ ರೂ. ಮೌಲ್ಯದ ಒಡವೆ, 2 ದ್ವಿಚಕ್ರ ವಾಹನ ವಶ>

ಮಂಗಳೂರು: ನಗರದ ಹೊರ ವಲಯದ ಸುರತ್ಕಲ್ನ ಎನ್‌ಎಂಪಿಟಿ ಕಾಲನಿ ನಿವಾಸಿ ರಮೇಶ್ ಪೂಜಾರಿ ಮನೆಯಿಂದ ಚಿನ್ನಾಭರಣ ಕಳವು ಮಾಡಿದ ಕುಖ್ಯಾತ ಆರೋಪಿಯನ್ನು ಉತ್ತರ ಉಪವಿಭಾಗ ರೌಡಿ ನಿಗ್ರಹ ದಳ ಪೊಲೀಸರು ಬಂಧಿಸಿದ್ದಾರೆ.

ಚಿಕ್ಕಮಗಳೂರು ನಿವಾಸಿ ಅಬೂಬಕ್ಕರ್ ಯಾನೆ ಇತ್ತೆ ಬರ್ಪೆ ಅಬೂಬಕ್ಕರ್(63) ಬಂಧಿತ ಆರೋಪಿ. ಆರೋಪಿಯಿಂದ ಕಳ್ಳತನ ಮಾಡಿದ ಚಿನ್ನಾಭರಣಗಳ ಪೈಕಿ 121 ಗ್ರಾಂ ತೂಕದ ಸುಮಾರು 3.50 ಲಕ್ಷ ರೂ. ಮೌಲ್ಯದ ಒಡವೆಗಳನ್ನು ಮತ್ತು ಕೃತ್ಯಕ್ಕೆ ಉಪಯೋಗಿಸಿದ 2 ದ್ವಿಚಕ್ರ ವಾಹನ ವಶಪಡಿಸಲಾಗಿದೆ.

ವಿವಿಧೆಡೆ ಕಳವು ಪ್ರಕರಣ ಆರೋಪಿ: ಆರೋಪಿ 2017ರಿಂದ ಮೂಡುಬಿದಿರೆ, ಬಜ್ಪೆ, ವೇಣೂರು, ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿವಿಧ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವ ಕುರಿತು ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

15 ದಿನಗಳ ಹಿಂದೆ ಕೋಡಿಕೆರೆಯ ಮನೆಯೊಂದರಿಂದ ಚಿನ್ನಾಭರಣ ಕಳವಾಗಿತ್ತು. ಈತನೇ ಕಳವು ಮಾಡಿರುವ ಬಗ್ಗೆ ಶಂಕೆ ಇದ್ದು, ಹೆಚ್ಚಿನ ವಿಚಾರಣೆಗೆ ಪೊಲೀಸರು ಕಸ್ಟಡಿಗೆ ಪಡೆದುಕೊಳ್ಳುವ ಸಾಧ್ಯತೆ ಇದೆ.
ಪಣಂಬೂರು ಉಪ ವಿಭಾಗ ಪ್ರಭಾರ ಸಹಾಯಕ ಪೊಲೀಸ್ ಆಯುಕ್ತರಾಗಿದ್ದ ಮಂಜುನಾಥ್ ಶೆಟ್ಟಿ, ಸಹಾಯಕ ಪೊಲೀಸ್ ಆಯುಕ್ತ ಶೀನಿವಾಸ್ ಗೌಡ ಮಾರ್ಗದರ್ಶನದಲ್ಲಿ ಸುರತ್ಕಲ್ ಪೊಲೀಸ್ ನಿರೀಕ್ಷಕ ರಾಮಕೃಷ್ಣ ಕೆ.ಜಿ., ಪಣಂಬೂರು ರೌಡಿ ನಿಗ್ರಹ ದಳ ಮತ್ತು ಸುರತ್ಕಲ್ ಪೊಲೀಸ್ ಠಾಣೆ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಅಂತಾರಾಜ್ಯ ಕಳವು ಆರೋಪಿ: ಇತ್ತೆ ಬರ್ಪೆ ಅಬೂಬಕ್ಕರ್ ವಿರುದ್ಧ ಕೇರಳದಲ್ಲೂ ಪ್ರಕರಣ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈತನ ವಿರುದ್ಧ ಸುಮಾರು 70ಕ್ಕೂ ಅಧಿಕ ಪ್ರಕರಣ ದಾಖಲಾಗಿವೆ. ಹಗಲಿನಲ್ಲಿ ಮನೆ ಬಳಿಗೆ ತೆರಳಿ ಕಳವು ಸಂಚು ರೂಪಿಸುವ ಈತ ರಾತ್ರಿ ವೇಳೆ ಕೃತ್ಯ ಎಸಗುತ್ತಾನೆ. ಮನೆಯವರು ಮಲಗಿರುವಾಗ ಕಿಟಕಿ ಮೂಲಕ ಬಾಗಿಲಿನ ಚಿಲಕ ತೆಗೆದು ಒಳನುಗ್ಗುತ್ತಾನೆ. ಇದಕ್ಕೂ ಮುನ್ನ ಗ್ಲಾಸ್ ನೆಲಕ್ಕೆ ಹಾಕಿ ಶಬ್ದ ಮಾಡುತ್ತಾನೆ. ಮನೆಯವರು ಏಳದೇ ಇದ್ದರೆ ಕಳವು ಕೃತ್ಯ ನಡೆಸುತ್ತಾನೆ. ರಮೇಶ್ ಪೂಜಾರಿ ಅವರ ಮನೆಯಲ್ಲಿ 45 ನಿಮಿಷ ಕಾಲ ಇದ್ದು ಕಳವು ಮಾಡಿರುವುದು ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...