
ನವಲಗುಂದ: ತಾಲೂಕಿನ ಅಳಗವಾಡಿ ಗ್ರಾಮದ ಗಿರಿಯಪ್ಪ ಗೊನ್ನಾಗರ ತೀವ್ರ ನಡಿಗೆಯ 5ಕಿಮೀ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಬಂಗಾರದ ಪದಕ ತಮ್ಮದಾಗಿಸಿಕೊಂಡಿದ್ದಾರೆ. ಧಾರವಾಡದದ ಆರ್.ಎನ್. ಶೆಟ್ಟಿ ಕ್ರೀಡಾಂಗಣದಲ್ಲಿ ಮಾಸ್ಟರ್ ಗೇಮ್ಸ್ ಅಸೋಸಿಯೇಷನ್ ಕರ್ನಾಟಕ ಸಂಘದಿಂದ ಇತ್ತೀಚೆಗೆ ಆಯೋಜಿಸಿದ್ದ ಹಿರಿಯ ನಾಗರಿಕರ ಸ್ಪರ್ಧೆಯಲ್ಲಿ ಗಿರಿಯಪ್ಪ ಚಿನ್ನದ ಪದಕಕ್ಕೆ ಮುತ್ತಿಕ್ಕಿದ್ದಾರೆ.