More

    ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.57 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ

    ಚಾಮರಾಜನಗರ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 1,57,87,000 ರೂ. ಮೌಲ್ಯದ 2. 170 ಕೆಜಿ ತೂಕದ ಚಿನ್ನಾಭರಣಗಳನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಸತ್ತೇಗಾಲ ಚೆಕ್‌ ಪೋಸ್ಟ್​ನಲ್ಲಿ ನಡೆದಿದೆ.

    ಗುರುವಾರ ಬೆಳಗ್ಗೆ 10:45ರ ಸುಮಾರಿಗೆ ಬೆಂಗಳೂರಿನಿಂದ ಕೊಳ್ಳೇಗಾಲದತ್ತ ಹುಂಡಯ ವೆನ್ಯೂ ಕಾರಿನಲ್ಲಿ ಕಾರ್ತಿಕ್​ ಹಾಗೂ ಚಿರಂತ್​ ಎಂಬುವವರು ಅಕ್ರಮವಾಗಿ ಚಿನ್ನಾಭರಣವನ್ನು ಸಾಗಿಸುತ್ತಿದ್ದರು. ಕಾರನ್ನು ಎಸ್​ಟಿಎಫ್​ ಅಧಿಕಾರಿಗಳು ತಡೆದು ಪರಿಶೀಲನೆ ನಡೆಸಿದಾಗ ಅದರಲ್ಲಿ ಚಿನ್ನಾಭರಣಗಳು ಪತ್ತೆಯಾಗಿದೆ. ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಅಧಿಕಾರಿಗಳು ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ.

    ಚಿನ್ನಾಭರಣ ಸಾಗಣೆ ಮಾಡುತ್ತಿದ್ದ ಬಗ್ಗೆ ವಿಚಾರಣೆ ಮಾಡಿದ ವೇಳೆ ಸ್ಪಷ್ಟ, ಸಮಂಜಸ ಉತ್ತರ ದೊರೆಯದ ಹಿನ್ನೆಲೆಯಲ್ಲಿ ಚಿನ್ನವನ್ನು ವಶಕ್ಕೆ ಪಡೆದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಹಾಗೂ ಪರಿಶೀಲನಾ ಕಾರ್ಯ ಪ್ರಗತಿಯಲ್ಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts