ಮತ್ತೆ ಕುಸಿದ ಚಿನ್ನ! ಕಳೆದ 2 ವಾರಗಳಲ್ಲಿ ಎಷ್ಟು ಕಡಿಮೆ? ದೇಶದ ಪ್ರಮುಖ ನಗರಗಳಲ್ಲಿ ಹೀಗಿದೆ ಇಂದಿನ ದರ | Gold Price

gold
Published on

Gold Price: ಚಿನ್ನ ಖರೀದಿಸಲು ತರಾತುರಿಯಲ್ಲಿರುವ ಗ್ರಾಹಕರಿಗೆ ಕೆಲವು ದಿನಗಳಿಂದ ಒಂದು ರೀತಿ ಶುಭ ಸುದ್ದಿಯೇ. ಇದಕ್ಕೆ ಕಾರಣ, ಚಿನ್ನದ ಬೆಲೆಯಲ್ಲಿ ಕಾಣುತ್ತಿರುವ ಇಳಿಕೆ ಪ್ರಮಾಣ. ಕಳೆದ ಹತ್ತು ದಿನಗಳಿಂದ ದೇಶದಲ್ಲಿ ಚಿನ್ನದ ದರ ಕ್ರಮೇಣವಾಗಿ ಕಡಿಮೆಯಾಗುತ್ತಿದೆ. ಎರಡು ವಾರಗಳಲ್ಲಿ 10 ಗ್ರಾಂ ಚಿನ್ನದ ಬೆಲೆ 2,300 ರೂ. ಇಳಿದಿದೆ. ಆದಾಗ್ಯೂ, ಮಂಗಳವಾರವೂ ಚಿನ್ನದ ದರ ಗಮನಾರ್ಹವಾಗಿ ಕುಸಿದಿದೆ.

ಮಂಗಳವಾರ (ಆ.19) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ 430 ರೂ. ಕಡಿಮೆಯಾದರೆ, 22 ಕ್ಯಾರೆಟ್ ಚಿನ್ನದ ಬೆಲೆ 400 ರೂ. ಇಳಿದಿದೆ. ಮತ್ತೊಂದೆಡೆ, ಅಂತಾರಾಷ್ಟ್ರೀಯ ಚಿನ್ನದ ದರ ಏರಿಕೆಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ ಏಳು ಡಾಲರ್ ಹೆಚ್ಚಾಗಿದೆ. ಪ್ರಸ್ತುತ, ಒಂದು ಔನ್ಸ್ ಚಿನ್ನ 3,339 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಈ ಮಧ್ಯೆ, ಬೆಳ್ಳಿಯ ಬೆಲೆಯೂ ಕುಸಿತ ಕಂಡಿದೆ. ಒಂದು ಕೆಜಿ ಬೆಳ್ಳಿ 1,000 ರೂ. ಕಡಿಮೆಯಾಗಿದೆ. ಇದು ಬೆಳ್ಳಿ ಕೊಳ್ಳುವ ಗ್ರಾಹಕರಲ್ಲಿ ಮಂದಹಾಸ ಮೂಡಿಸಿದೆ.

ಅಂತಾರಾಷ್ಟ್ರೀಯ ಉದ್ವಿಗ್ನತೆ ಕಡಿಮೆಯಾಗುತ್ತಿದ್ದಂತೆ, ಚಿನ್ನದ ದರ ಕ್ರಮೇಣ ಇಳಿಯುತ್ತಿದೆ. ರಷ್ಯಾ ಮತ್ತು ಯುಕ್ರೇನ್ ನಡುವಿನ ಯುದ್ಧವನ್ನು ಕೊನೆಗೊಳಿಸಲು ಟ್ರಂಪ್​-ಪುಟಿನ್ ಮಾತುಕತೆ, ಝೆಲೆನ್ಸ್ಕಿ ಮತ್ತು ಟ್ರಂಪ್​ ಭೇಟಿ, ಮತ್ತೊಂದೆಡೆ, ಇತ್ತೀಚಿನವರೆಗೂ ಅಂತಾರಾಷ್ಟ್ರೀಯ ರಾಜಕೀಯ ಉದ್ವಿಗ್ನತೆಗಳು ಕಡಿಮೆಯಾಗುತ್ತಿರುವ ಸೂಚನೆಗಳ ಹಿನ್ನೆಲೆಯಲ್ಲಿ ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾದ ಚಿನ್ನದ ಬೇಡಿಕೆ ದಿನದಿಂದ ದಿನಕ್ಕೆ ಕುಸಿಯುತ್ತಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 92,500 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,00,900 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 92,350 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 1,00,750 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 92,350 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 1,00,750 ರೂ. ಆಗಿದೆ.

ಬೆಳ್ಳಿ ಬೆಲೆ 1,000 ರೂ. ಹೆಚ್ಚಳ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,16,000 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,26,000 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,26,000 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net