ಚಿನ್ನ ಖರೀದಿಗೆ ಒಳ್ಳೆಯ ಸಮಯ ಸನ್ನಿಹಿತ; ಮತ್ತೇ ಕುಸಿದ ಬೆಲೆ! ಹೀಗಿದೆ ಇಂದಿನ ಗೋಲ್ಡ್​ ದರ? | Gold Rate

ವಿಜಯವಾಣಿ - 2025-06-30T111748.476
Published on

Gold Rate: ಕಳೆದ ಒಂದು ವಾರದಲ್ಲಿ ಕ್ರಮೇಣವಾಗಿ ಇಳಿಕೆ ಕಾಣುತ್ತಿರುವ ಚಿನ್ನದ ಬೆಲೆ ಗ್ರಾಹಕರಲ್ಲಿ ಅತೀವ ಸಂತಸ ಮೂಡಿಸಿದೆ. 1 ಲಕ್ಷ ರೂ. ಗಡಿದಾಟಿ ಹೋಗಿದ್ದ ದರ ಇದೀಗ 97 ಸಾವಿರಕ್ಕೆ ಬಂದು ನಿಂತಿದೆ. ಇಂದೂ ಸಹ ಚಿನ್ನದ ಬೆಲೆಯಲ್ಲಿ ಕುಸಿತ ಕಂಡುಬಂದಿದ್ದು, ಮದುವೆ ಸೀಸನ್​ ಬಿಜಿಯಲ್ಲಿರುವ ಗ್ರಾಹಕರಿಗೆ ಚಿನ್ನ ಕೊಳ್ಳುವ ಸಮಯ ಕೂಡಿಬಂದಿದೆ. ಹಾಗಿದ್ದರೆ, ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ ಎಷ್ಟಿದೆ? ಎಂಬುದರ ವಿವರ ಹೀಗಿದೆ ಗಮನಿಸಿ.

ಕಳೆದ ಹತ್ತು ದಿನಗಳಿಂದ ಇಳಿಕೆಯಾಗುತ್ತಿರುವ ಚಿನ್ನದ ದರ ಇಂದು ಕೂಡ ಕಡಿಮೆಯಾಗಿದೆ. ಅಂತಾರಾಷ್ಟ್ರೀಯ ಅನಿಶ್ಚಿತತೆ ಕ್ರಮೇಣ ಕಡಿಮೆಯಾಗುತ್ತಿರುವುದರಿಂದ, ಚಿನ್ನದ ದರ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಎಂದು ತಜ್ಞರು ಹೇಳಿದ್ದಾರೆ. ಜುಲೈನಲ್ಲಿಯೂ ಇದೇ ಪರಿಸ್ಥಿತಿ ಮುಂದುವರಿಯಲಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಮತ್ತು ಮುಂಬರುವ ದಿನಗಳಲ್ಲಿ ಚಿನ್ನದ ದರ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಇಂದು (ಜೂ.30) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 150 ರೂ. ಕಡಿಮೆಯಾದರೆ, 24 ಕ್ಯಾರೆಟ್ ಚಿನ್ನದ ಬೆಲೆ 160 ರೂ. ಇಳಿದಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯೂ ಇಳಿಕೆ ಕಂಡಿದೆ. ಒಂದು ಔನ್ಸ್ ಚಿನ್ನದ ಬೆಲೆ ಆರು ಡಾಲರ್‌ಗಳಷ್ಟು ಕುಸಿದಿದ್ದು, ಪ್ರಸ್ತುತ 3,280 ಡಾಲರ್​ನಲ್ಲಿ ವಹಿವಾಟು ನಡೆಸುತ್ತಿದೆ. ಮತ್ತೊಂದೆಡೆ, ಬೆಳ್ಳಿಯ ಬೆಲೆಯೂ ಕೊಂಚ ಕಡಿಮೆಯಾಗಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ದರ ಎಷ್ಟಿದೆ?

  • ನವದೆಹಲಿಯಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 89,300 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 97,410 ರೂ. ಆಗಿದೆ.
  • ಮುಂಬೈ, ಬೆಂಗಳೂರು, ಚೆನ್ನೈ ನಗರಗಳಲ್ಲಿ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ 89,150 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 97,260 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ, ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್ ಚಿನ್ನದ 10 ಗ್ರಾಂ ಬೆಲೆ 89,150 ರೂ. ಇದ್ದರೆ, 24 ಕ್ಯಾರೆಟ್ ಬೆಲೆ 97,260 ರೂ. ಆಗಿದೆ.

ಹೀಗಿದೆ ಬೆಳ್ಳಿ ಬೆಲೆ

  • ದೆಹಲಿ, ಮುಂಬೈ ಮತ್ತು ಬೆಂಗಳೂರು ನಗರಗಳಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,07,700 ರೂ. ಆಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,17,700 ರೂ. ಆಗಿದೆ.
  • ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಒಂದು ಕೆಜಿ ಬೆಳ್ಳಿ ಬೆಲೆ 1,17,700 ರೂ. ಇದೆ,(ಏಜೆನ್ಸೀಸ್).

ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net