

Gold Rates: ಚಿನ್ನ ಖರೀದಿಸಲು ಹಪಾಹಪಿಯಲ್ಲಿರುವ ಗ್ರಾಹಕರಿಗೆ ಒಂದಲ್ಲ ಒಂದು ಬೇಸರದ ಸುದ್ದಿ ಎದುರಾಗುತ್ತಲೇ ಇದೆ. ಕಳೆದ ಕೆಲವು ದಿನಗಳಿಂದ ಚಿನ್ನದ ಬೆಲೆ ಇಳಿಕೆ ಕಾಣುತ್ತಿದ್ದು, ಇನ್ನಷ್ಟು ಕಡಿಮೆಯಾಗುವ ಲಕ್ಷಣಗಳು ಗೋಚರಿಸಿತ್ತು. ಆದರೆ, ಅಷ್ಟರೊಳಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಂಕ ಸಮರ ಮತ್ತೇ ಏರಿಕೆ ಸಾಧ್ಯತೆಗಳ ಮುನ್ಸೂಚನೆಯನ್ನು ನೀಡಿದೆ.
ಭಾರತದ ಮೇಲೆ ಶೇ.25ರಷ್ಟು ಸುಂಕ ವಿಧಿಸಿರುವ ಟ್ರಂಪ್, ಇತರೆ ದೇಶಗಳ ಮೇಲೂ ಸುಂಕ ಸಮರ ಸಾಧಿಸಿದ್ದಾರೆ. ಈ ಬೆಳವಣಿಗೆಯ ಬೆನ್ನಲ್ಲೇ ಗೋಲ್ಡ್ ಬೆಲೆಯಲ್ಲಿ ಭಾರಿ ಬದಲಾವಣೆಗಳು ಕಂಡುಬಂದಿವೆ. ಕಳೆದ ಮೂರು ದಿನಗಳಿಂದ ತೀವ್ರವಾಗಿ ಕುಸಿಯುತ್ತಿದ್ದ ಚಿನ್ನದ ಬೆಲೆ ಶನಿವಾರ ತೀವ್ರ ಏರಿಕೆಯಾಗಿದೆ. ಇಂದು (ಆ.02) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,530 ರೂ. ಏರಿಕೆ ಕಂಡರೆ, 22 ಕ್ಯಾರೆಟ್ ಚಿನ್ನ 1,400 ರೂ. ಏರಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವೂ ಗಣನೀಯವಾಗಿ ಏರಿಕೆಯಾಗಿದೆ. ಒಂದು ಔನ್ಸ್ ಚಿನ್ನದ ಬೆಲೆ 65 ಡಾಲರ್ನಷ್ಟು ಏರಿಕೆಯಾಗಿದೆ. ಇದರೊಂದಿಗೆ, ಒಂದು ಔನ್ಸ್ ಚಿನ್ನದ ಬೆಲೆ 3,363 ಡಾಲರ್ನಲ್ಲಿ ವಹಿವಾಟು ನಡೆಸುತ್ತಿದೆ. ಮುಂಬರುವ ವಾರಗಳಲ್ಲಿ ಚಿನ್ನದ ದರ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ತಜ್ಞರು ಭವಿಷ್ಯ ನುಡಿದಿದ್ದಾರೆ. ಆದರೆ, ಬೆಳ್ಳಿ ಬೆಲೆಯಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.
ಗಮನಿಸಿ: ಮೇಲೆ ತಿಳಿಸಲಾದ ಬೆಲೆಗಳು ಬೆಳಗಿನ ಮಾರುಕಟ್ಟೆಯ ಆರಂಭದಲ್ಲಿ ಮಾತ್ರ. ಈ ಚಿನ್ನ ಮತ್ತು ಬೆಳ್ಳಿ ದರಗಳು ಬದಲಾವಣೆಗೆ ಒಳಪಟ್ಟಿರುತ್ತವೆ. ದಯವಿಟ್ಟು ಗಮನಿಸಿ.