ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ | Gold Rates

ವಿಜಯವಾಣಿ - 2025-05-09T111040.030
Published on

Gold Rates: ಒಂದೆಡೆ ಭಾರತ ಮತ್ತು ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದರೆ, ಮತ್ತೊಂದೆಡೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಕೊಂಚ ಇಳಿಕೆ ಕಂಡಿದೆ. ಎರಡೂ ದೇಶಗಳ ಮಧ್ಯೆ ಕ್ಷಿಪಣಿ, ಡ್ರೋನ್​ ದಾಳಿಗಳು ನಡೆಯುತ್ತಿದಂತೆ, ಭಾರತದಲ್ಲಿ ಚಿನ್ನದ ಬೆಲೆ ತೀವ್ರವಾಗಿ ಕುಸಿದಿದೆ. ನಾಲ್ಕು ದಿನಗಳಿಂದ ಏರಿಕೆ ಕಂಡಿದ್ದ ಚಿನ್ನದ ಬೆಲೆ ಇದೀಗ ಇದ್ದಕ್ಕಿದ್ದಂತೆ ಕುಸಿದಿದೆ.

ಶುಕ್ರವಾರ (ಮೇ.09) ಬೆಳಗ್ಗೆ ದಾಖಲಾದ ವಿವರಗಳ ಪ್ರಕಾರ, 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 1,250 ರೂ.ಗಳಷ್ಟು ಕಡಿಮೆಯಾದರೆ, 22 ಕ್ಯಾರೆಟ್ ಚಿನ್ನದ ಬೆಲೆ 1,150 ರೂ.ಗಳಷ್ಟು ಕಡಿಮೆಯಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಏರಿಕೆಯ ಹೊರತಾಗಿಯೂ, ಭಾರತದಲ್ಲಿ ಚಿನ್ನದ ಬೆಲೆಯಲ್ಲಿ ದಿಢೀರ್​ ಹಾಗೂ ಭಾರಿ ಕುಸಿತ ಕಂಡುಬಂದಿದೆ. ಶುಕ್ರವಾರ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಾಗಿದೆ. ಒಂದು ಔನ್ಸ್ ಚಿನ್ನ (31.10 ಗ್ರಾಂ) 23 ಡಾಲರ್​ನಷ್ಟು ಏರಿಕೆಯಾಗಿ 3,327 ಡಾಲರ್​ಗೆ ತಲುಪಿದೆ. ಮತ್ತೊಂದೆಡೆ, ಬೆಳ್ಳಿ ಬೆಲೆಗಳು ಸ್ಥಿರವಾಗಿವೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ

  • ರಾಷ್ಟ್ರ ರಾಜಧಾನಿಯಲ್ಲಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 90,300 ರೂ. ಇದ್ದರೆ, 24 ಕ್ಯಾರೆಟ್‌ನ ಬೆಲೆ 98,500 ರೂ. ಆಗಿದೆ.
  • ಮುಂಬೈ, ಬೆಂಗಳೂರು ಮತ್ತು ಚೆನ್ನೈ ನಗರಗಳಲ್ಲಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 90,150 ರೂ. ಇದ್ದರೆ, 24 ಕ್ಯಾರೆಟ್‌ನ ಬೆಲೆ 10 ಗ್ರಾಂ 98,350 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 90,150 ರೂ. ಇದೆ. 24 ಕ್ಯಾರೆಟ್‌ನ ಬೆಲೆ 98,350 ರೂ. ಆಗಿದೆ.

ಹೀಗಿದೆ ಬೆಳ್ಳಿ ದರ

ದೆಹಲಿ, ಮುಂಬೈ ಮತ್ತು ಬೆಂಗಳೂರಿನಲ್ಲಿ ಕೆಜಿ ಬೆಳ್ಳಿಯ ಬೆಲೆ 99,000 ರೂ. ಇದೆ.

ಚೆನ್ನೈನಲ್ಲಿ ಕೆಜಿ ಬೆಳ್ಳಿಯ ಬೆಲೆ 1,11,000 ರೂ.ಗಳಲ್ಲಿ ಮುಂದುವರಿದಿದೆ.

ಇನ್ನು ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಬೆಳ್ಳಿ ಬೆಲೆ ಸ್ಥಿರವಾಗಿದೆ.

ನಿಮ್ಮ ಗಮನಕ್ಕೆ: ಮೇಲೆ ತಿಳಿಸಲಾದ ದರ ಇಂದು ಬೆಳಗ್ಗೆ 10 ಗಂಟೆಯವರೆಗೆ ದಾಖಲಾದ ಮಾಹಿತಿ. ಚಿನ್ನ-ಬೆಳ್ಳಿ ಬೆಲೆಗಳು ದಿನಕ್ಕೆ ಹಲವು ಬಾರಿ ಏರುಪೇರು ಆಗುತ್ತಿರುತ್ತವೆ. ನಿಖರವಾದ ಬೆಲೆಗಳಿಗಾಗಿ, ನಿಮ್ಮ ಹತ್ತಿರದ ಆಭರಣ ಮಳಿಗೆ ಅಥವಾ ಅಧಿಕೃತ ವೆಬ್​ಸೈಟ್​ ದರ ಪರಿಶೀಲಿಸಿ,(ಏಜೆನ್ಸೀಸ್).‘

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net