

ಬೆಂಗಳೂರು: ವಿದೇಶದಿಂದ ಕಣ್ತಪ್ಪಿಸಿ ನಟ್, ಬೋಲ್ಟ್ ಮಾದರಿಯಲ್ಲಿ ಟ್ರಾವೆಲ್ ಬ್ಯಾಗಿನ ವೀಲ್ ಮತ್ತು ಮಕ್ಕಳ ಬಟ್ಟೆಯಲ್ಲಿಟ್ಟು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿತರಿಂದ 12 ಲಕ್ಷದ 49 ಸಾವಿರದ 92 ರೂ. ಮೌಲ್ಯದ 244.92 ಗ್ರಾಂ. ಚಿನ್ನ ವಶಪಡಿಸಿಕೊಂಡಿದ್ದಾರೆ.
ಬ್ಯಾಂಕಾಕ್ ಮತ್ತು ದುಬೈನಿಂದ ಬಂದ ಇಬ್ಬರು ಪ್ರಯಾಣಿಕರು ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದರು. 6E076 ಮತ್ತು 6E096 ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಇವರನ್ನು ವಶಕ್ಕೆ ಪಡೆದು, ಪರಿಶೀಲಿಸಿದ್ದಾರೆ. ಈ ವೇಳೆ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.