ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 2.9 ಕೆಜಿ ಚಿನ್ನ ವಶ, ಮಂಗಳೂರು ಮೂಲದ ಆರೋಪಿ ಸೆರೆ

gold new
Published on

ಕಾಸರಗೋಡು: ಕಾರಿನಲ್ಲಿ ಸಾಗಿಸುತ್ತಿದ್ದ 2.8 ಕಿ.ಗ್ರಾಂ ಚಿನ್ನವನ್ನು ಕಣ್ಣೂರು ವಿಭಾಗ ಕಸ್ಟಂಸ್ ಅಧಿಕಾರಿಗಳು ಕಾಸರಗೋಡು ಜಿಲ್ಲೆಯ ಚೆರ್ವತ್ತೂರಿನಿಂದ ವಶಪಡಿಸಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಿವಾಸಿ ದೇವರಾಜ ಶೇಟ್ ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. ವಶಪಡಿಸಿಕೊಂಡ ಚಿನ್ನದ ಮೌಲ್ಯ 2.4 ಕೋಟಿ ರೂ. ಎಂದು ಅಂದಾಜಿಸಲಾಗಿದೆ. ಕಾರಿನೊಳಗೆ ಪ್ರತ್ಯೇಕ ಕೋಶ ನಿರ್ಮಿಸಿ ಚಿನ್ನ ಸಾಗಿಸುತ್ತಿರುವ ಬಗ್ಗೆ ಲಭಿಸಿದ ಮಾಹಿತಿಯನ್ವಯ ಕಾರ್ಯಾಚರಣೆ ನಡೆಸಲಾಗಿದೆ.

ಚೆರ್ವತ್ತೂರು ಸಮೀಪ ಕಸ್ಟಂಸ್ ಕಣ್ಣೂರು ವಿಭಾಗ ಆಯುಕ್ತ ಪಿ.ಪಿ ರಾಜೀವನ್ ನೇತೃತ್ವದ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿದೆ. ವಿದೇಶದಿಂದ ತರಿಸಲಾಗಿರುವ 24 ಕ್ಯಾರೆಟ್ ಚಿನ್ನ ಇದಾಗಿದ್ದು, ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾಗಾಟಕ್ಕೆ ಬಳಸಿದ್ದ ಫೋರ್ಡ್ ಕಾರನ್ನು ವಶಪಡಿಸಿಕೊಳ್ಳಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net