ಚಿನ್ನಾಭರಣ ಪ್ರಿಯರಿಗೆ ಶುಭಸುದ್ದಿ: ಬಂಗಾರದ ಬೆಲೆಯಲ್ಲಿ ಇಳಿಕೆ

gold
Published on

ನವದೆಹಲಿ: ನೀವು ಚಿನ್ನಾಭರಣ ಪ್ರಿಯರಾಗಿದ್ದರೆ ಈ ಗುರುವಾರ ನಿಮಗೆ ಶುಭ ದಿನ ಎಂದುಕೊಳ್ಳಬಹುದು. ಏಕೆಂದರೆ ಚಿನ್ನದ ದರದಲ್ಲಿ ಇಂದು ಇಳಿಕೆ ಕಂಡುಬಂದಿದೆ.

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 264 ರೂಪಾಯಿ ಇಳಿಕೆ ಕಂಡುಬಂದಿದೆ. ಈ ಮೂಲಕ 10 ಗ್ರಾಂ ಚಿನ್ನದ ದರ 46,452 ರೂಪಾಯಿಷ್ಟಾಗಿದೆ. ಈ ಹಿಂದಿನ ವಹಿವಾಟಿನಲ್ಲಿ ಆ ಬೆಲೆ 46,716 ರೂಪಾಯಿಯಾಗಿತ್ತು.

ಬೆಳ್ಳಿ ಬೆಲೆಯಲ್ಲಿ ಕೆಜಿಗೆ 4 ರೂಪಾಯಿ ಏರಿಕೆಯಾಗಿದ್ದು ಒಂದು ಕೆಜಿ ಬೆಳ್ಳಿ ಬೆಲೆ 65,484 ರೂಪಾಯಿಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆ ಮತ್ತು ರೂಪಾಯಿ ಮೌಲ್ಯ ಕೊಂಚ ಏರಿರುವುದರಿಂದಾಗಿ ದೇಶದಲ್ಲಿಯೂ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡುಬಂದಿರುವುದಾಗಿ ಹೇಳಲಾಗಿದೆ. ಸದ್ಯ ಅಮೆರಿಕದ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ 74.43 ರೂಪಾಯಿಯಷ್ಟಿದೆ. (ಪಿಟಿಐ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net