ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಿಕ್ಸಿಯಲ್ಲಿ ಸಾಗಿಸುತ್ತಿದ್ದ 34.75 ಲಕ್ಷ ರೂ. ಮೌಲ್ಯದ ಚಿನ್ನ ವಶ

ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರಿಂದ ಕಸ್ಟಮ್ಸ್​ ಅಧಿಕಾರಿಗಳು 34.75 ಲಕ್ಷ ರೂಪಾಯಿ ಮೌಲ್ಯದ 24 ಕ್ಯಾರೇಟ್​ನ 1,052.90 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ದುಬೈನಿಂದ ಆಗಮಿಸಿದ್ದ ಸ್ಪೈಸ್​ಜೆಟ್​ ಎಸ್​ಜಿ60 ವಿಮಾನದಲ್ಲಿನ ಪ್ರಯಾಣಿಕರೊಬ್ಬರನ್ನು ಅಧಿಕಾರಿಗಳು ಅನುಮಾನಗೊಂಡು ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಯಾಣಿಕನ ವರ್ತನೆಯಿಂದ ಸಂಶಯಗೊಂಡು ಅಧಿಕಾರಿಗಳು ಆತನ ಬ್ಯಾಗ್​ ಪರಿಶೀಲನೆ ನಡೆಸಿದ್ದು, ಬ್ಯಾಗ್​ನಲ್ಲಿದ್ದ ಮಿಕ್ಸಿಯಲ್ಲಿ ಚಿನ್ನವನ್ನು ಅಡಗಿಸಿಟ್ಟುಕೊಂಡು ಸಾಗಿಸಲು ಯತ್ನಿಸುತ್ತಿದ್ದ ಎನ್ನಲಾಗಿದೆ. ವ್ಯಕ್ತಿಯನ್ನು ಹೆಚ್ಚಿನ ತನಿಖೆಗೆ ವಶಕ್ಕೆ ಪಡೆಯಲಾಗಿದೆ. (ಏಜೆನ್ಸೀಸ್​)

Leave a Reply

Your email address will not be published. Required fields are marked *