

ಬೆಳ್ತಂಗಡಿ: ಬದುಕು ಕಟ್ಟೋಣ ತಂಡ ನೇತೃತ್ವದಲಿ ನಡೆದ ಹಡಿಲು ಬಿದ್ದ 4.30 ಎಕರೆ ಗದ್ದೆಯಲ್ಲಿ ಭತ್ತದ ನಾಟಿಗೆ ಸಹಯೋಗ ನಿಡಿದ ಬೆಳ್ತಂಗಡಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಗೋಲ್ಡನ್ ಬುಕ್ ಆಫ್ ರೆಕಾರ್ಡ್ಸ್ ದಾಖಲೆಗೆ ಸೇರಿದೆ.
ಉಜಿರೆ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ಶರತ್‌ಕೃಷ್ಣ ಪಡ್ವೆಟ್ನಾಯ, ವಿಧಾನ ಪರಿಷತ್ ಸದಸ್ಯ ಪ್ರತಾಪ್‌ಸಿಂಹ ನಾಯಕ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ, ಸೋನಿಯಾ ಯಶೋವರ್ಮ, ರೋಟರಿ ಕ್ಲಬ್ ಅಧ್ಯಕ್ಷ ಪೂರಣ್ ವರ್ಮ, ಬದುಕು ಕಟ್ಟೋಣ ತಂಡದ ಸಂಚಾಲಕ ಮೋಹನ್ ಕುಮಾರ್, ರೋಟರಿ ಕ್ಲಬ್ ಸದಸ್ಯ ಶ್ರೀಧರ ಕೆ.ವಿ, ಪತ್ರಕರ್ತರ ಸಂಘದ ಅಧ್ಯಕ್ಷ ಪ್ರಸಾದ್ ಶೆಟ್ಟಿ ಏಣಿಂಜೆ ಅವರಿಗೆ ಹಸ್ತಾಂತರಿಸಿದರು. ಸಂಘದ ಕಾರ್ಯದರ್ಶಿ ತುಕಾರಾಮ್, ಕೋಶಾಧಿಕಾರಿ ಜಾರಪ್ಪ ಪೂಜಾರಿ, ಮಾಜಿ ಅಧ್ಯಕ್ಷರಾದ ಚೈತ್ರೇಶ್ ಇಳಂತಿಲ, ಆರ್.ಎನ್.ಪೂವಣಿ, ಮನೋಹರ್ ಬಳಂಜ ಉಪಸ್ಥಿತರಿದ್ದರು.