

ಕೋಟ: ಸಾಲಿಗ್ರಾಮ ಮಕ್ಕಳ ಮೇಳ-50ರ ಸುವರ್ಣ ಪರ್ವದ ಎರಡನೇ ಕಾರ್ಯಕ್ರಮ ಮಂಗಳೂರಿನ ಕಲ್ಕೂರ ಪ್ರತಿಷ್ಠಾನ ಆಶ್ರಯದಲ್ಲಿ ಮಂಗಳೂರಿನ ಡಾನ್ ಬಾಸ್ಕೋ ಸಭಾಂಗಣದಲ್ಲಿ ಅ.20ರಂದು ಸಂಜೆ 4.30ಕ್ಕೆ ನಡೆಯಲಿದೆ.
ಮಂಗಳೂರು ಕೋಡಿಕಲ್‌ನ ಸರಯೂ ಬಾಲ ಯಕ್ಷವೃಂದ ಮಕ್ಕಳ ಮೇಳದ ನಿರ್ದೇಶಕ ರವಿ ಅಲೆವೂರಾಯ ವರ್ಕಾಡಿ ಅವರಿಗೆ ಸುವರ್ಣ ಕಲಾ ಗೌರವ ಪುರಸ್ಕಾರ ನೀಡಲಾಗುವುದು. ಕಲ್ಕೂರ ಪ್ರತಿಷ್ಠಾನದ ಪ್ರದೀಪ ಕುಮಾರ ಕಲ್ಕೂರ, ಕಸಾಪ ಪೂರ್ವಾಧ್ಯಕ್ಷ ಹರಿಕೃಷ್ಣ ಪುನರೂರು, ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್.ಶ್ರೀಧರ ಹಂದೆ, ಲೆಕ್ಕಪರಿಶೋಧಕ ಪ್ರಕಾಶ್ ಬಾಸ್ರಿ, ಉದ್ಯಮಿ ಸೂರ್ಯನಾರಾಯಣ ರಾವ್, ಭಾರತೀಯ ಜೀವ ವಿಮಾ ನಿಗಮದ ನಿವೃತ್ತ ಅಧಿಕಾರಿ ಪಿ.ಎಲ್.ಉಪಾಧ್ಯಾಯ, ಲೆಕ್ಕಪರಿಶೋಧಕ ಶಿವಾನಂದ ಪೈ ಮಂಗಳೂರು, ಯಕ್ಷಾರಾಧನ ಕಲಾಕೇಂದ್ರದ ಗುರು ವಿದುಷಿ ಸುಮಂಗಲಾ ರತ್ನಾಕರ್, ಎನ್.ರಾಘವೇಂದ್ರ ಮುಖ್ಯ ಅಭ್ಯಾಗತರಾಗಿ ಭಾಗವಹಿಸಲಿದ್ದಾರೆ.
ಮಕ್ಕಳ ಮೇಳದ ಕಾರ್ಯಾಧ್ಯಕ್ಷ ಕೆ.ಮಹೇಶ್ ಉಡುಪ, ಅಧ್ಯಕ್ಷ ಬಲರಾಮ ಕಲ್ಕೂರ, ಉಪಾಧ್ಯಕ್ಷ ಜನಾರ್ದನ ಹಂದೆ ಮಂಗಳೂರು ಉಪಸ್ಥಿತರಿರುವರು. ಬಳಿಕ ಮಕ್ಕಳ ಮೇಳದ ಕಲಾವಿದರಿಂದ ವೀರವೃಷಸೇನ ಯಕ್ಷಗಾನ ಪ್ರದರ್ಶನವಿದೆ ಎಂದು ಮಕ್ಕಳ ಮೇಳದ ಕಾರ್ಯದರ್ಶಿ ಸುಜಯೀಂದ್ರ ಹಂದೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.