More

    ಸುವರ್ಣಸೌಧಕ್ಕೆ ಕಚೇರಿ ಸ್ಥಳಾಂತರಿಸಿ

    ಬೆಳಗಾವಿ: ಈ ಬಾರಿಯ ಅಧಿವೇಶನದಲ್ಲಿ ಚರ್ಚಿಸಿ ತಕ್ಷಣವೇ ಬೆಳಗಾವಿ ಸುವರ್ಣಸೌಧಕ್ಕೆ ಬೆಂಗಳೂರಿನಲ್ಲಿರುವ ಉನ್ನತ ಮಟ್ಟದ ಕಚೇರಿಗಳನ್ನು ಸ್ಥಳಾಂತರಿಸಬೇಕು. ಇಲ್ಲದಿದ್ದಲ್ಲಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯಕ್ಕಾಗಿ ಉಗ್ರ ಹೋರಾಟ ನಡೆಸಬೇಕಾದೀತು ಎಂದು ಹೋರಾಟಗಾರ, ಹಿರಿಯ ವಕೀಲ ಬಿ.ಡಿ. ಹಿರೇಮಠ ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

    ಈ ವಿಚಾರವಾಗಿ ಶನಿವಾರ ಸುವರ್ಣಸೌಧದಲ್ಲಿ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಅವರಿಗೆ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

    ಧಾರವಾಡದಲ್ಲಿರುವ ಕಚೇರಿಗಳನ್ನು ಇಲ್ಲಿಗೆ ತರುವುದಲ್ಲ. ಒಂದು ವೇಳೆ ಉತ್ತರ ಕರ್ನಾಟಕಕ್ಕೆ ಈ ಬಾರಿಯೂ ನ್ಯಾಯ ಸಿಗದೇ ಹೋದಲ್ಲಿ ಹೋರಾಟ ಇನ್ನಷ್ಟು ಬಿಗಿಗೊಳಿಸುತ್ತೇವೆ. ಬೆಳಗಾವಿಯಲ್ಲಿ ಸುವರ್ಣಸೌಧ ಸ್ಥಾಪಿಸಿದ ನಂತರ ಉತ್ತರ ಕರ್ನಾಟಕದ ಜನರ ಎಲ್ಲ ಸಮಸ್ಯೆಗಳಿಗೆ ಪರಿಹಾರ ಲಭಿಸಿತು ಅಂದುಕೊಂಡಿದ್ದೆವು.

    ನಾವಿನ್ನು ‘ದ್ವಿತೀಯ ದರ್ಜೆ’ ಜನರಲ್ಲ ಎಂಬ ಭಾವನೆ ಮೂಡಿತ್ತು. ಆದರೆ, ಸುವರ್ಣಸೌಧ ಕಟ್ಟಿ 8 ವರ್ಷ ಕಳೆದರೂ ಹೋರಾಟ ಮಾಡಿಯೇ ಸೌಲಭ್ಯ ಪಡೆಯುವ ದುಃಸ್ಥಿತಿ ಎದುರಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹೈಕೋರ್ಟ್, ಕೆಎಟಿ, ಮಹದಾಯಿ ಯೋಜನೆ ಸೇರಿದಂತೆ ಎಲ್ಲದಕ್ಕೂ ಹೋರಾಟ ಮಾಡಲೇಬೇಕಾದ ಕೆಟ್ಟ ಪರಿಸ್ಥಿತಿ ನಿರ್ಮಾಣವಾಗಲು ಈ ಭಾಗದ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯೇ ಕಾರಣ.

    ಇನ್ನಾದರೂ ಉ.ಕ. ಜನಪ್ರತಿನಿಧಿಗಳು ಎಲ್ಲರೂ ಒಗ್ಗಟ್ಟಿನಿಂದ ಈ ಬಗ್ಗೆ ಅಧಿವೇಶನದಲ್ಲಿ ಚರ್ಚಿಸಬೇಕು. ಸರ್ಕಾರ ತಕ್ಷಣವೇ ಉನ್ನತ ಮಟ್ಟದ ಕಚೇರಿಗಳನ್ನು ಸುವರ್ಣಸೌಧಕ್ಕೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts