More

    ಕುತೂಹಲ ಮೂಡಿಸುತ್ತಿದ್ದಾಳೆ ‘ಚಿನ್ನದ ರಾಣಿ’: ಐಎಎಸ್‌ ಅಧಿಕಾರಿ ತಲೆದಂಡ!

    ತಿರುವನಂತಪುರ: ತಿರುವನಂತಪುರದ ವಿಮಾನ ನಿಲ್ದಾಣದಲ್ಲಿ ನಿನ್ನೆ ಸಿಕ್ಕಿದ್ದ 30 ಕೆ.ಜಿ. ತುಂಬಿಟ್ಟ ಚಿನ್ನದ ಬ್ಯಾಗ್‌ ಕ್ಷಣ ಕ್ಷಣಕ್ಕೂ ಕುತೂಹಲದ ತಿರುವು ಪಡೆದುಕೊಳ್ಳುತ್ತಿದೆ.

    ರಾಜತಾಂತ್ರಿಕ ರಕ್ಷಣೆ ಹೊಂದಿರುವ ‘ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌’ನಲ್ಲಿ ಈ ಚಿನ್ನ ಸಿಕ್ಕಿತ್ತು. ಇದನ್ನು ವಿಮಾನ ನಿಲ್ದಾಣದ ಕಸ್ಟಮ್ಸ್‌ ಸಿಬ್ಬಂದಿ ವಶಪಡಿಸಿಕೊಂಡಿದ್ದರು. ಇಷ್ಟೊಂದು ಭಾರಿ ಪ್ರಮಾಣದ ಚಿನ್ನ ಇಲ್ಲಿಗೆ ಹೇಗೆ ಬಂತು? ಅದೂ ರಾಜತಾಂತ್ರಿಕ ರಕ್ಷಣೆ ಹೊಂದಿರುವ ಡಿಪ್ಲೊಮ್ಯಾಟಿಕ್‌ ಬ್ಯಾಗೇಜ್‌ನಲ್ಲಿ ಇದು ಹೇಗೆ ಬಂತು ಎಂಬ ಬಗ್ಗೆ ತನಿಖೆ ನಡೆಯುತ್ತಿದ್ದ ಸಂದರ್ಭದಲ್ಲಿ ಇದರ ಹಿಂದಿರುವುದು ಮೊದಲು ಕೇಳಿಬಂದ ಹೆಸರು ಸ್ವಪ್ನಾ ಸುರೇಶ್‌.

    ತಿರುವನಂತಪುರದ ಯುನೈಟೆಡ್ ಅರಬ್ ಎಮಿರೇಟ್ಸ್ ಕಾನ್ಸುಲೇಟ್‌ನಲ್ಲಿ ಕಾರ್ಯನಿರ್ವಾಹಕ ಕಾರ್ಯದರ್ಶಿಯಾಗಿದ್ದ ಸ್ವಪ್ನಾ ಅವರ ಸಹಾಯಕ್ಕೆ ನಿಂತಿರುವವರ ತನಿಖೆ ಮಾಡುತ್ತಿರುವ ‍ಪೊಲೀಸರಿಗೆ ಇದೀಗ ಮೊದಲು ಕಂಡುಬಂದದ್ದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಪ್ರಧಾನ ಕಾರ್ಯದರ್ಶಿಯಾಗಿರುವ ಐಎಎಸ್‌ ಅಧಿಕಾರಿ ಎಂ.ಶಿವಶಂಕರ್.

    ಈ ಹಿನ್ನೆಲೆಯಲ್ಲಿ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಜಾ ಮಾಡಲಾಗಿದೆ. ಸ್ವಪ್ನಾ ಸುರೇಶ್‌ ಅವರ ಜತೆಗೆ ಇವರ ನೇರ ಸಂಪರ್ಕವಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರನ್ನು ತೆಗೆದುಹಾಕಲಾಗಿದೆ.

    ಈ ಕುರಿತು ಡಿಡಿ ನ್ಯೂಸ್ ಮಲಯಾಳಂ ಟ್ವೀಟ್ ಮಾಡಿದೆ. ಐಎಎಸ್‌ ಅಧಿಕಾರಿ ಎಂ.ಶಿವಶಂಕರ್ ಅವರನ್ನು ಮುಖ್ಯಮಂತ್ರಿಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ತೆಗೆದುಹಾಕಲಾಗಿದೆ. ರಾಜತಾಂತ್ರಿಕ ಚಾನೆಲ್ ಬಳಸಿ ಚಿನ್ನದ ಕಳ್ಳಸಾಗಣೆ ದಂಧೆಯ ಭಾಗವಾಗಿದ್ದ ಸ್ವಪ್ನಾ ಸುರೇಶ್ ಅವರೊಂದಿಗೆ ಎಂ ಶಿವಶಂಕರ್ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಟ್ವಿಟರ್‌ನಲ್ಲಿ ತಿಳಿಸಲಾಗಿದೆ.

    ಏನಿದು ಕೇಸ್‌: ಈ ಲಿಂಕ್‌ ನೋಡಿ- ಈ ‘ಚಿನ್ನದ ರಾಣಿ’ಯ ಇತಿಹಾಸವೇ ರೋಚಕ; ಇವಳಿಂದ ಕೇರಳ ಸಿಎಂ ಕುರ್ಚಿ ಗಡಗಡ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts