More

    ಗೋಣಿಕೊಪ್ಪದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ

    ಗೋಣಿಕೊಪ್ಪ: ಪಟ್ಟಣದ ಗೋಣಿಕೊಪ್ಪ ಆಟೋ ಮಾಲೀಕರು ಹಾಗೂ ಚಾಲಕರ ಸಂಘದಿಂದ ಬುಧವಾರ ಕನ್ನಡ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

    ಆಟೋ ನಿಲ್ದಾಣದಲ್ಲಿ ಸಂಘದ ಗೌರವ ಅಧ್ಯಕ್ಷ ಕೆ.ಪಿ.ಬೋಪಣ್ಣ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಹರಿಶ್ಚಂದ್ರಪುರದ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದ ಬಳಿ ಕನ್ನಡಾಂಬೆ ಭುವನೇಶ್ವರಿ ತೇರಿನ ಮೆರವಣಿಗೆಗೆ ಜಿಪಂ ಮಾಜಿ ಸದಸ್ಯ ಸಿ.ಕೆ.ಬೋಪಣ್ಣ, ಗೋಣಿಕೊಪ್ಪ ಗ್ರಾಪಂ ಸದಸ್ಯರಾದ ಪ್ರಮೋದ್ ಗಣಪತಿ, ಬಿ.ಎನ್.ಪ್ರಕಾಶ್ ಚಾಲನೆ ನೀಡಿದರು.

    ಡೊಳ್ಳು ಕುಣಿತ, ವೀರಗಾಸೆ ಹಾಗೂ ಗೊಂಬೆಗಳ ನೃತ್ಯ ಪ್ರದರ್ಶನ ಮೆರವಣಿಗೆಗೆ ಮೆರುಗು ತಂದವು. ನೂರಾರು ಚಾಲಕರು ತಮ್ಮ ಆಟೋಗಳಿಗೆ ಕನ್ನಡ ಬಾವುಟ ಕಟ್ಟಿಕೊಂಡು ಮೆರವಣಿಗೆಯಲ್ಲಿ ಸಾಗಿದರು. ಪ್ರಮುಖ ರಸ್ತೆಗಳಲ್ಲಿ ಸಾಗಿದ ಮೆರವಣಿಗೆ ಉಮಾ ಮಹೇಶ್ವರಿ ದೇವಾಲಯ ಬಳಿ ಅಂತ್ಯ ಕಂಡಿತು. ಮಧ್ಯಾಹ್ನ ಆಟೋ ನಿಲ್ದಾಣದಲ್ಲಿ ನಾಗರಿಕರಿಗೆ ಅನ್ನಸಂತರ್ಪಣೆ ನಡೆಯಿತು.

    ಅಕ್ರಮ ಸಕ್ರಮ ಸಮಿತಿ ಮಾಜಿ ಅಧ್ಯಕ್ಷ ಕಾಡ್ಯಮಾಡ ಗಿರೀಶ್ ಗಣಪತಿ, ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ಅಧ್ಯಕ್ಷ ಜಿಮ್ಮ ಸುಬ್ಬಯ್ಯ, ಗೋಣಿಕೊಪ್ಪ ಆಸ್ಪತ್ರೆಯ ವೈದ್ಯ ಡಾ.ಸುರೇಶ್, ಕನ್ನಡ ರಾಜ್ಯೋತ್ಸವ ಸಮಿತಿ ಅಧ್ಯಕ್ಷ ಕೆ.ವೈ.ಅಶ್ವತ್ಥ್, ಕಾರ್ಯದರ್ಶಿ ಸುರೇಶ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts