ರೈತರ ಬೇಡಿಕೆ ಈಡೇರಿಕಗೆ ಆಗ್ರಹಿಸಿ ಜಾಥಾ

ರೈತ ಸಂಘ,ಹಸಿರು ಸೇನೆಯಿಂದ ಆಯೋಜನೆ

ವಿಜಯವಾಣಿ ಸುದ್ದಿಜಾಲ ಗೋಣಿಕೊಪ್ಪಲು
ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ನೇತೃತ್ವದಲ್ಲಿ ರೈತರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಮ್ಮಿಕೊಂಡಿದ್ದ ಜಾಥಾಗೆ ಕುಟ್ಟದಲ್ಲಿ ಚಾಲನೆ ದೊರಕಿತು.
ಕುಟ್ಟ ಬಸ್ ನಿಲ್ದಾಣದಲ್ಲಿ ರೈತ ಸಂಘದ ನೂರಾರು ಸದಸ್ಯರು ಪಾಲ್ಗೊಂಡು ಮಾನವ ಸರಪಳಿ ನಿರ್ಮಿಸಿ ರೈತರಿಗೆ ಆಗುತ್ತಿರುವ ತೊಂದರೆ, ಸಮಸ್ಯೆಗಳ ಬಗ್ಗೆ ರೈತ ಮುಖಂಡರು ಸಾರ್ವಜನಿಕರ ಗಮನ ಸೆಳೆದರು. ಕುಟ್ಟ ಭಾಗದ ಪ್ರಗತಿಪರ ಕೃಷಿಕ ಮಾಚಿಮಾಡ ಸಿ. ಸುಬ್ಬಯ್ಯ ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾಗೆ ಚಾಲನೆ ನೀಡಿದರು. ಜಾಥಾ ಶ್ರೀಮಂಗಲ, ಟಿ. ಶೆಟ್ಟಿಗೇರಿ, ಹುದಿಕೇರಿ, ಪೊನ್ನಂಪೇಟೆ, ಗೋಣಿಕೊಪ್ಪ ವಿರಾಜಪೇಟೆ, ಮೂರ್ನಾಡು, ಮಾರ್ಗವಾಗಿ ಮಡಿಕೇರಿಗೆ ತೆರಳಿತು.
ಪ್ರಗತಿಪರ ರೈತ ಪುಚ್ಚಿಮಾಡ ಲಾಲಾ ಪೂಣಚ್ಚ ಮಾತನಾಡಿ, ಜಿಲ್ಲೆಯ ರೈತರು ರೈತ ಸಂಘದೊಂದಿಗೆ ಪಾಲ್ಗೊಂಡು ನ್ಯಾಯಯುತವಾಗಿ ರೈತರಿಗೆ ಸಿಗಬೇಕಾದ ಸವಲತ್ತುಗಳನ್ನು ಹೋರಾಟದ ಮೂಲಕ ಪಡೆದುಕೊಳ್ಳಲು ರೈತರು ಕೈ ಜೋಡಿಸಬೇಕೆಂದು ಕರೆ ನೀಡಿದರು.
ಕೃಷಿ ಪಂಡಿತ ಪ್ರಶಸ್ತಿ ವಿಜೇತ ಸೋಮೇಂಗಡ ಗಣೇಶ್ ಮಾತನಾಡಿ, ರೈತರು ಬೆಳೆ ಬೆಳೆಗಳಿಗೆ ಬೆಂಬಲ ಬೆಲೆ ದೊರೆಯುತ್ತಿಲ್ಲ. ಸಾಲಮನ್ನಾ ವಿಚಾರದಲ್ಲಿ ಸರ್ಕಾರ ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಕೂಡಲೇ ರೈತರ ಹೋರಾಟಕ್ಕೆ ಸ್ಪಂದಿಸಿ ರೈತರ ಸಮಸ್ಯೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿದರು.
ರೈತ ಸಂಘ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನುಸೋಮಯ್ಯ, ಕುಟ್ಟ ವಿಎಸ್‌ಎಸ್‌ಎನ್ ಅಧ್ಯಕ್ಷ ಮಚ್ಚಮಾಡ ಸುಬ್ರಮಣಿ, ರೈತ ಮುಖಂಡರುಗಳಾದ ಚೆಪ್ಪುಡೀರ ಕಾರ್ಯಪ್ಪ, ಶಂಕರಪ್ಪ, ಕಳ್ಳೆಂಗಡ ಸುರೇಶ್, ಪೆಮ್ಮಂಡ ರಾಜ ಕುಶಾಲಪ್ಪ, ಪುಚ್ಚಿಮಾಡ ಶುಭಾಷ್ ಸುಬ್ಬಯ್ಯ, ಚೆಟ್ರುಮಾಡ ಸುಜಯ್ ಬೋಪಯ್ಯ, ಅಜ್ಜಮಾಡ ಚಂಗಪ್ಪ, ಬಾಚಮಾಡ ಭವಿ ಕುಮಾರ್, ಮಂಡೇಪಂಡ ಪ್ರವೀಣ್, ಚಂಗುಲಂಡ ಸೂರಜ್, ದೇವಣಿರ ಸಿ.ಬೋಪಣ್ಣ, ಸಭಿತ ಭೀಮಯ್ಯ ಪಾಲ್ಗೊಂಡಿದ್ದರು.


ಫೋಟೋ 12 ಜಿಕೆಎಲ್ 02 :
ಕುಟ್ಟದಲ್ಲಿ ಆಯೋಜಿಸಿದ್ದ ರೈತ ಸಂಘದ ಜಾಥಾಗೆ ಪ್ರಗತಿಪರ ಕೃಷಿಕ ಮಾಚಿಮಾಡ ಸಿ. ಸುಬ್ಬಯ್ಯ ಹಸಿರು ನಿಶಾನೆ ತೋರಿಸುವ ಚಾಲನೆ ನೀಡಿದರು. ಕುಟ್ಟ ವಿಎಸ್‌ಎಸ್‌ಎನ್ ಅಧ್ಯಕ್ಷ ಮಚ್ಚಮಾಡ ಸುಬ್ರಮಣಿ, ರೈತ ಮುಖಂಡರಾದ ಚೆಪ್ಪುಡೀರ ಕಾರ್ಯಪ್ಪ, ಶಂಕರಪ್ಪ, ಕಳ್ಳೆಂಗಡ ಸುರೇಶ್, ಪೆಮ್ಮಂಡ ರಾಜ ಕುಶಾಲಪ್ಪ ಇದ್ದರು.
3: ರೈತರ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಕುಟ್ಟದಲ್ಲಿ ರೈತರು ಮಾನವ ಸರಪಳಿ ನಿರ್ಮಿಸಿ ಜಾಗೃತಿ ಮೂಡಿಸಿದರು.


Leave a Reply

Your email address will not be published. Required fields are marked *