More

    ಸತ್ಕಾರ್ಯಗಳಿಗೆ ಎಲ್ಲರ ಸಹಕಾರ ಅಗತ್ಯ

    ಸೇಡಂ: ನಮ್ಮ ನೆಲ ಸಾಂಸ್ಕೃತಿಕ, ಸಾಹಿತ್ಯಿಕವಾಗಿ ಸಾಕಷ್ಟು ಶ್ರೀಮಂತವಾಗಿದೆ. ಈ ನಿಟ್ಟಿನಲ್ಲಿ ಮಠಾಧೀಶರ ಪ್ರಯತ್ನವೂ ದೊಡ್ಡದಾಗಿ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಹೇಳಿದರು.

    ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ನಿರ್ಮಾಣಗೊಂಡ ದಾಸೋಹ ಹಾಗೂ ಗುರು ಭವನ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿ, ಮುಂಬರುವ ದಿನಗಳಲ್ಲಿ ಪಟ್ಟಣಕ್ಕೆ ಮೂಲ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವೆ. ದಾಸೋಹ ಪರಿಕಲ್ಪನೆಯಿಂದ ಸಮಾಜದಲ್ಲಿ ಹಸಿದವರ ಹೊಟ್ಟೆ ತುಂಬಿಸಲು ಸಾಧ್ಯ. ಆದ್ದರಿಂದ ಇಂತಹ ಸತ್ಕಾರ್ಯಗಳಿಗೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಕೈಜೋಡಿಸಬೇಕು ಎಂದು ಕರೆ ನೀಡಿದರು.

    ರಾಜ್ಯಸಭಾ ಮಾಜಿ ಸದಸ್ಯ ಡಾ.ಬಸವರಾಜ ಪಾಟೀಲ್ ಸೇಡಂ ಅಧ್ಯಕ್ಷತೆ ವಹಿಸಿ ಮಾತನಾಡಿ, ಮನೆಯೇ ಮೊದಲ ದೇವಸ್ಥಾನವೆಂದು ಭಾವಿಸಿ, ಪೂಜೆ, ಜಪ-ತಪ ಹಾಗೂ ಸತ್ಸಂಗ ಕಾರ್ಯಕ್ರಮ ಮಾಡಬೇಕು. ಜೀವನದಲ್ಲಿ ಭಕ್ತಿ, ಸಂಸ್ಕೃತಿ ಅಳವಡಿಸಿಕೊಂಡಾಗ ಯಶಸ್ಸು ಸಾಧ್ಯವಾಗಲಿದೆ ಎಂದು ತಿಳಿಸಿದರು.

    ಹಾರಕೂಡದ ಶ್ರೀ ಡಾ.ಚನ್ನವೀರ ಶಿವಾಚಾರ್ಯರು ದಾಸೋಹ ಭವನ, ಗುರು ಭವನ, ನೀರು ಶುದ್ಧೀಕರಣ ಘಟಕ ಲೋಕಾರ್ಪಣೆಗೊಳಿಸಿದರು.
    ಶಿವಶಂಕರ ಮಠದ ಶ್ರೀ ಶಿವಶಂಕರ ಶಿವಾಚಾರ್ಯರು, ಹಾಲಪ್ಪಯ್ಯ ಮಠದ ಶ್ರೀ ಪಂಚಾಕ್ಷರಿ ಸ್ವಾಮೀಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಬಸವರಾಜ ದೇಶಮುಖ, ಪ್ರವಚನಕಾರ ಅನ್ನದಾನೇಶ್ವರ ಶಾಸ್ತ್ರಿ , ಶಿವನಾಗಯ್ಯಶಾಸ್ತ್ರಿ ಇತರರಿದ್ದರು.

    ಚನ್ನಬಸಪ್ಪ ಗವಿ ಸಂಪಾದಿತ `ಭಕ್ತಿ ಪುಷ್ಪಾಂಜಲಿ’ ಕೃತಿ ಬಿಡುಗಡೆಗೊಳಿಸಲಾಯಿತು. ದಾಸೋಹ ಭವನ ನಿರ್ಮಾಣದ ದಾನಿಗಳನ್ನು ಸತ್ಕರಿಸಲಾಯಿತು. ಶಾಂತಾನAದ ಗವಾಯಿ ಪ್ರಾರ್ಥಿಸಿದರು. ಕೊತ್ತಲ ಬಸವೇಶ್ವರ ದೇವಾಲಯದ ಶ್ರೀ ಸದಾಶಿವ ಸ್ವಾಮೀಜಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಜಗದೀಶ ಕಡಬಗಾಂವ ನಿರೂಪಣೆ ಮಾಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts