'ಗುಡ್‌ ಗುಡ್ಡರ್‌ ಗುಡ್ಡೆಸ್ಟ್‌' ಪ್ರಾರಂಭ ... ಇದು ಹಲವು ಜಾನರ್​ಗಳ ಸಿನಿಮಾ

Good Gooder Goodest 1
Published on

ಬೆಂಗಳೂರು: ಸಹಾಯಕ ನಿರ್ದೇಶಕರಾದವರು, ಸಂಭಾಷಣೆಕಾರರು ಸ್ವತಂತ್ರ ನಿರ್ದೇಶಕರಾಗುವುದು ಹೊಸದೇನಲ್ಲ. ಕಳೆದ 15 ವರ್ಷಗಳಿಂದ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿ ಕೆಲಸ ಮಾಡಿರುವ ಯುವಧೀರ, ಇದೀಗ ಗುಡ್​ ಗುಡ್ಡರ್​ ಗುಡ್ಡೆಸ್ಟ್​' ಎಂಬ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕರಾಗಿದ್ದಾರೆ. ಈ ಚಿತ್ರದ ಮುಹೂರ್ತ ಇತ್ತೀಚೆಗೆ ಬೆಂಗಳೂರಿನ ವೀರಾಂಜನೇಯ ಸ್ವಾಮಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ.

ತಮ್ಮ ಚೊಚ್ಚಲ ಚಿತ್ರದ ಕುರಿತು ಮಾತನಾಡುವ ಯುವಧೀರ, 'ಇದಕ್ಕೂ ಮುನ್ನ 'ಮಿಂಚು', 'ಜಾನಿ ಜಾನಿ ಎಸ್ ಪಪ್ಪಾ' ಸೇರಿದಂತೆ ಹಲವು ಸಿನಿಮಾಗಳಲ್ಲಿ ಕೆಲಸ ಮಾಡಿದ್ದೇನೆ. ಇದು ನನ್ನ ಮೊದಲ ನಿರ್ದೇಶನ ಸಿನಿಮಾ. ಒಂದೇ ಕಥೆ ಮೂರು ಟ್ರ್ಯಾಕ್ ನಲ್ಲಿ ನಡೆಯುತ್ತದೆ. ಇದು ಯಾವ ಜಾನರ್ ಸಿನಿಮಾ ಎಂದು ಹೇಳೋದು ಕಷ್ಟ. ಇದು ಹಲವು ಜಾನರ್​ಗಳಿಗೆ ಮಾಡುವುದು ಕಷ್ಟ. ಹೀಗಾಗಿ ಇದು ಹಲವು ಜಾನರ್​ಗಳ ಸಿನಿಮಾ' ಎನ್ನುತ್ತಾರೆ ಯುವಧೀರ.

ಈ ಚಿತ್ರದಲ್ಲೊಂದು ಪ್ರಮುಖ ಪಾತ್ರ ಮಾಡುತ್ತಿರುವ ಸುಚೇಂದ್ರ ಪ್ರಸಾದ್​ ಮಾತನಾಡಿ, 'ನಿರ್ದೇಶಕರು ಇಟ್ಟಿರುವ ಶೀರ್ಷಿಕೆ ವ್ಯಾಕರಣ ಬದ್ಧವಲ್ಲ. ಹಾಗೆಯೇ ಸಿನಿಮಾ ಕೂಡ ಎಲ್ಲ ವ್ಯಾಕರಣವನ್ನ ಮುರಿಯಲಿದೆ. ಇದು ನಿಜ ಜೀವನದ ಕೆಲವು ಪ್ರಸಂಗ ತಳುಕು ಹಾಕಿ ಕಥೆ ರೆಡಿ ಮಾಡಿದ್ದಾರೆ. ಒಳ್ಳೆ ಕಥಾಹಂದರವನ್ನು ತಯಾರಿಸಿದ್ದಾರೆ' ಎಂದು ಅಭಿಪ್ರಾಯಪಡುತ್ತಾರೆ.

ಯುವಧೀರ ನಿರ್ದೇಶನದ ಜೊತೆಗೆ ತಾವೇ ಈ ಸಿನಿಮಾದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದು, ಅವರಿಗೆ ಜೋಡಿಯಾಗಿ ಆದ್ಯಾ ಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ. ಉಳಿದಂತೆ ಸೋನು ಗೌಡ, ಪ್ರಮೋದ್ ಶೆಟ್ಟಿ, ಗೋಪಾಲಕೃಷ್ಣ ದೇಶಪಾಂಡೆ, ಸುಚೇಂದ್ರ ಪ್ರಸಾದ್, ವಿ.ಮನೋಹರ್, ಸೇರಿದಂತೆ ದೊಡ್ಡ ತಾರಾಬಳಗವೇ ಇದೆ.

ಶ್ರೀನಿಧಿ ಪಿಕ್ಚರ್ಸ್​ನಡಿ ಸುರೇಶ್‌ ಬಿ ಈ ಚಿತ್ರ ನಿರ್ಮಿಸುತ್ತಿದ್ದಾರೆ. ಬೆಂಗಳೂರು,‌ ಮಂಗಳೂರು, ಮೈಸೂರು ಸುತ್ತಮುತ್ತ 45 ದಿನಗಳ ಕಾಲ ಶೂಟಿಂಗ್ ನಡೆಯಲಿದೆ. ಸಂದೀಪ್ ಹೊಲ್ಲೂರಿ ಕ್ಯಾಮೆರಾ, ಶಶಾಂಕ್ ಶೇಷಗಿರಿ ಸಂಗೀತ ಈ ಚಿತ್ರಕ್ಕಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net