More

    ಮಕ್ಕಳಿಗೆ ಉತ್ತಮ ಆರೋಗ್ಯ, ಶಿಕ್ಷಣ ಅತ್ಯವಶ್ಯ: ಗೋಪಾಲಕೃಷ್ಣ ಬೇಳೂರು

    ರಿಪ್ಪನ್‌ಪೇಟೆ: ಮಕ್ಕಳ ಪ್ರತಿಭೆ ಅನಾವರಣಕ್ಕೆ ಪಾಲಕರು ಮತ್ತು ಶಿಕ್ಷಕರು ವೇದಿಕೆ ಕಲ್ಪಿಸಬೇಕು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
    ಮಂಗಳವಾರ ಸಮೀಪದ ಬೆಳ್ಳೂರು ಗ್ರಾಪಂ ವ್ಯಾಪ್ತಿಯ ಹೆಬ್ಬಳ್ಳಿಯಲ್ಲಿ ಬಾಲಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಗ್ರಾಮೀಣ ಮಕ್ಕಳ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ವೇದಿಕೆ ಸೃಷ್ಟಿಸುವ ಅಗತ್ಯವಿದೆ ಎಂದರು. ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಸೇರಿ ಪ್ರತಿಭೆ ಗುರುತಿಸಲು ಹೆಚ್ಚಿನ ಪ್ರಾಶಸ್ತ್ಯ ನೀಡಿ ಈಗಾಗಲೇ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದು, ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು. ಯಾವ ಮಕ್ಕಳೂ ಶಿಕ್ಷಣದಿಂದ ವಂಚಿತರಾಗಬಾರದು. ಆದ್ದರಿಂದ ಎಲ್ಲ ಮಕ್ಕಳಿಗೆ ಉತ್ತಮ ಆರೋಗ್ಯ, ಶಿಕ್ಷಣ ನೀಡುವ ಕೆಲಸ ಸರ್ಕಾರ ಮಾಡುತ್ತಿದೆ ಎಂದರು.
    ಬಾಲವಿಕಾಸ ಸಮಿತಿಯ ಅಧ್ಯಕ್ಷೆ ಸುಮಿತ್ರಾ ನಾಗರಾಜ್, ಗ್ರಾಪಂ ಅಧ್ಯಕ್ಷೆ ಹೇಮಾವತಿ ಸತೀಶ್, ಉಪಾಧ್ಯಕ್ಷ ಬೆಳ್ಳೂರು ತಿಮ್ಮಪ್ಪ, ಸದಸ್ಯರಾದ ರಾಜೇಶ, ಕವಿತಾ, ರವೀಂದ್ರ, ಪಲ್ಲವಿ ನಾಗರಾಜ್, ಅರುಣ್‌ಕುಮಾರ್, ಷಣ್ಮುಖಪ್ಪ, ಶಿಶು ಅಭಿವೃದ್ಧಿ ಇಲಾಖೆ ಮೇಲ್ವಿಚಾರಕಿ ಚಂದ್ರಕಲಾ, ಪಿಡಿಒ ಕುಶ, ಎಸ್‌ಡಿಎಂಸಿ ಅಧ್ಯಕ್ಷ ಪುರುಷೋತ್ತಮ, ಮುಖ್ಯಶಿಕ್ಷಕ ಶಿವಮೂರ್ತಿ, ಅಂಗನವಾಡಿ ಕಾರ್ಯಕತೆ ವೀಣಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts