More

    ರೈತರಿಗೆ ಗುಡ್‌ನ್ಯೂಸ್; ಬರ ಪರಿಹಾರ ಜಮೆ ಪ್ರಕ್ರಿಯೆ ಆರಂಭ

    ಬೆಂಗಳೂರು: ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ ಆರ್ಥಿಕ ನೆರವನ್ನು ರೈತರ ಖಾತೆಗೆ ಜಮಾ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ಎರಡು ದಿನಗಳಲ್ಲಿ 27.38 ಲಕ್ಷ ರೈತರ ಖಾತೆಗೆ ಪರಿಹಾರ ಮೊತ್ತ ಪಾವತಿಯಾಗಲಿದೆ.
    ಕಂದಾಯ ಇಲಾಖೆ ಬಿಡುಗಡೆ ಮಾಡಿದ ಪತ್ರಿಕಾ ಹೇಳಿಕೆ ಪ್ರಕಾರ, 27,38,911 ರೈತರಿಗೆ ಅರ್ಹತೆಯನುಸಾರ ಒಟ್ಟು 2,425.13 ಕೋಟಿ ರೂ.ವನ್ನು ಡಿಬಿಟಿ ಮುಖಾಂತರ ನೇರ ವರ್ಗಾವಣೆ ಮಾಡಲು ಕಳೆದ ವಾರಂತ್ಯವೇ ಕ್ರಮವಹಿಸಲಾಗಿದೆ.
    ರಾಜ್ಯ ಸರ್ಕಾರದ ಕ್ರಮದ ನಂತರ ಆರ್‌ಬಿಐನಿಂದ ರೈತರ ಖಾತೆಗೆ ಹಣ ವರ್ಗಾಯಿಸಲು 48 ಗಂಟೆಗಳವರೆಗೆ ಸಮಯ ತೆಗೆದುಕೊಳ್ಳುತ್ತದೆ. ಇದೇ ಸೋಮವಾರದಿಂದ ಅನ್ವಯವಾಗುವಂತೆ ರೈತರ ಖಾತೆಗೆ ನೇರವಾಗಿ ಜಮಾ ಆಗಲಿದೆ. ಎಲ್ಲಾ ರೈತರ ಖಾತೆಗಳಿಗೆ ಮುಂದಿನ 2-3 ದಿನಗಳೊಳಗಾಗಿ ಬರಪರಿಹಾರ ಮೊತ್ತವು ಜಮೆಯಾಗಲಿದೆ.
    ರಾಜ್ಯದ 224 ತಾಲೂಕುಗಳನ್ನು ಈಗಾಗಲೇ ಬರಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಮೊದಲ ಹಂತದಲ್ಲಿ ರಾಜ್ಯ ಸರ್ಕಾರವೇ ರೈತರಿಗೆ ಬರ ಪರಿಹಾರ ಪಾವತಿಸಿದ್ದು, ಇದೀಗ ಎನ್‌ಡಿಆರ್‌ಎ್ ಪರಿಹಾರ ಹಣ ಲಭ್ಯವಾಗಿದ್ದು ಆ ಹಣವನ್ನೂ ನಿಯಮದಂತೆ ಶೀಘ್ರವಾಗಿ ರೈತರ ಖಾತೆಗೆ ವರ್ಗಾಯಿಸಲು ಕ್ರಮವಹಿಸಲಾಗಿದೆ. ಅಲ್ಲದೆ ರಾಜ್ಯದ ಬಾಕಿ ಪರಿಹಾರ ಹಣ ಪಡೆಯಲೂ ಕೇಂದ್ರದ ಜತೆಗಿನ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.
    ಎಸ್‌ಡಿಆರ್‌ಎ್ ಮಾರ್ಗಸೂಚಿ ಪ್ರಕಾರ ಎನ್‌ಡಿಆರ್‌ಎ್ ಅನುದಾನ ನಿರೀಕ್ಷಿಸಿ ಮೊದಲ ಹಂತದ ಪರಿಹಾರವಾಗಿ 33,58,999 ರೈತರಿಗೆ ಒಟ್ಟು 636.45 ಕೋಟಿ ರೂ.ವನ್ನು ಈಗಾಗಲೇ ಫೆಬ್ರವರಿ ಹಾಗೂ ಮಾರ್ಚ್‌ನಲ್ಲಿ ಪಾವತಿಸಲಾಗಿದೆ. ಈ ಪೈಕಿ 4,43,691 ಅತೀ ಕಡಿಮೆ ಜಮೀನು ಇರುವ ರೈತರಿಗೆ ಸಂಪೂರ್ಣ ಪರಿಹಾರ ಪಾವತಿಸಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts