More

    ರೈತರಿಗಷ್ಟೇ ಅಲ್ಲ, ಬಡವರಿಗೂ ಇದೆ ಗುಡ್​ ನ್ಯೂಸ್​: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದೇನು?

    ಬೆಂಗಳೂರು: ರೈತರ ಬೆಳೆ ಖರೀದಿಗೆ ಯಾವುದೇ ಅಡ್ಡಿಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ರೈತರು ಹಾಗೂ ಗ್ರಾಹಕರ ಹಿತ ಕಾಪಾಡಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ಭರವಸೆ ನೀಡಿದರು.

    ಟೊಮ್ಯಾಟೊ, ಕರಬೂಜ, ದ್ರಾಕ್ಷಿ ಸರಬರಾಜಿಗೆ ಅಡಚಣೆಯಾಗದಂತೆ ಕ್ರಮ ತೆಗೆದುಕೊಳ್ಳಲು ಪೊಲೀಸರಿಗೆ ಸೂಚಿಸಲಾಗಿದೆ. ಹಾಪ್ ಕಾಮ್ಸ್ ನಲ್ಲಿ ಟೊಮ್ಯಾಟೊ, ದ್ರಾಕ್ಷಿ, ಕಲ್ಲಂಗಡಿ ಹಾಗೂ ಕೋಳಿ ಮೊಟ್ಟೆ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ರೈಲುಗಳ ಮೂಲಕ ಹೊರ ರಾಜ್ಯಗಳಿಗೆ ಹಣ್ಣು ಹಂಪಲು ತರಕಾರಿ ಕಳುಹಿಸುವ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದರು.

    ಅಲ್ಲದೆ, ಅಡುಗೆ ಎಣ್ಣೆ ಸೇರಿ ಅಗತ್ಯ ವಸ್ತುಗಳ ‌ಕೊರತೆ ಇಲ್ಲ. ಜನ ಆತಂಕಪಡುವ ಅಗತ್ಯವಿಲ್ಲ. 27 ರೇಷ್ಮೆ ‌ಮಾರುಕಟ್ಟೆ ತೆಗೆಯಲು ಸೂಚಿಸಲಾಗಿದೆ. ಅಕ್ಕಿ ಗಿರಣಿ ಆರಂಭಿಸಲು ಆದೇಶಿಸಲಾಗಿದೆ ಎಂದು ಹೇಳಿದ ಸಿಎಂ, ನಾಳೆಯಿಂದ ಬಡವರಿಗೆ ಕೆಎಂಎಫ್​ ಹಾಲು ಉಚಿತವಾಗಿ ನೀಡಲಾಗುವುದು. ಕೆಎಂಎಫ್ ಮೂಲಕ 7 ಲಕ್ಷ ಲೀಟರ್ ಹಾಲನ್ನು ಸರ್ಕಾರ ‌ಖರೀದಿಸಿ ಕೊಳಚೆ ಪ್ರದೇಶಗಳು ಹಾಗೂ ಬಡಜನರ ವಾಸಿಸುವ ಪ್ರದೇಶಗಳಲ್ಲಿ ‌ಉಚಿತವಾಗಿ ಏಪ್ರಿಲ್ 14 ರವರೆಗೆ ಹಾಲು ವಿತರಿಸಲಾಗುವುದು ಎಂದು ಅವರು ಘೋಷಿಸಿದರು.

    ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ರೈತರ ಸಮಸ್ಯೆಗಳನ್ನು ನಿವಾರಿಸಲು ಉನ್ನತ ಮಟ್ಟದ ಸಭೆ ನಡೆಸಿದರು. ಸಭೆಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ್, ತೋಟಗಾರಿಕಾ ಸಚಿವ ನಾರಾಯಣಗೌಡ, ಸಹಕಾರ ಸಚಿವ ಎಸ್. ಟಿ. ಸೋಮಶೇಖರ್, ಕಂದಾಯ ಸಚಿವ ಆರ್. ಅಶೋಕ್, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಗೋಪಾಲಯ್ಯ ಮೊದಲಾದವರು ಉಪಸ್ಥಿತರಿದ್ದರು.

    ವರ್ಕ್ ​ಫ್ರಂ ಹೋಮ್​ನಲ್ಲಿದ್ದ ಸೀನಿಯರ್ಸ್​ಗೆ ಶಾಕ್​- ಮತ್ತೆ ಕಚೇರಿ ನೋಡುವ ಭಾಗ್ಯ ತಪ್ಪಿ ಹೋಯ್ತು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts