ಸರ್ಕಾರದಲ್ಲಿ ಅಜ್ಜಂಪೀರ್ ಖಾದ್ರಿಗೆ ಉತ್ತಮ ಸ್ಥಾನ : ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ

blank

ಸವಣೂರ: ಅಜ್ಜಂಪೀರ್ ಖಾದ್ರಿ ಅವರಿಗೆ ಸರ್ಕಾರದಲ್ಲಿ ಉತ್ತಮ ಸ್ಥಾನ ಕೊಡುತ್ತೇವೆ. ಶಿಗ್ಗಾಂವಿಯಲ್ಲಿ ಪಠಾಣ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸಾರ್ವಜನಿಕರಲ್ಲಿ ಮನವಿ ಮಾಡಿದರು.

ತಾಲೂಕಿನ ಹುರಳಿಕುಪ್ಪಿ ಗ್ರಾಮದಲ್ಲಿ ಸೋಮವಾರ ಏರ್ಪಡಿಸಿದ್ದ ಸವಣೂರ-ಶಿಗ್ಗಾಂವಿ ಉಪ ಚುನಾವಣೆ ಪ್ರಚಾರ ಸಭೆಯಲ್ಲಿ ಅಭ್ಯರ್ಥಿ ಯಾಶೀರಖಾನ್ ಪಠಾಣ ಪರ ಮತಯಾಚಿಸಿ ಮಾತನಾಡಿದರು.

ಇದು ಕೇವಲ ಉಪಚುನಾವಣೆಯಲ್ಲ. ನನಗೆ, ನನ್ನ ಸರ್ಕಾರಕ್ಕೆ ಹೆಚ್ಚಿನ ಶಕ್ತಿ ನೀಡುವ ಮಹತ್ವದ ಚುನಾವಣೆ. ಆದ್ದರಿಂದ, ಕಾಂಗ್ರೆಸ್ ಅಭ್ಯರ್ಥಿ ಪೈಲ್ವಾನ್ ಪಠಾಣ ಅವರನ್ನು ಗೆಲ್ಲಿಸಿ ನನಗೆ ಶಕ್ತಿ ನೀಡಬೇಕು ಎಂದರು.

ಬಸವರಾಜ ಬೊಮ್ಮಾಯಿ ನೀರಾವರಿ ಸಚಿವರಾಗಿ, ಗೃಹ ಸಚಿವರಾಗಿ, ಮುಖ್ಯಮಂತ್ರಿಯಾಗಿ ಕ್ಷೇತ್ರಕ್ಕೆ ಏನು ನೀಡಿದ್ದಾರೆ ಹುಡುಕಿ ಹೇಳಿ. ಕ್ಷೇತ್ರಕ್ಕೆ ಏನೂ ಕೆಲಸ ಮಾಡದ ಬೊಮ್ಮಾಯಿ ಅವರ ಪುತ್ರನಿಗೆ ಮತ ಹಾಕುವುದರಲ್ಲಿ ಅರ್ಥವೇ ಇಲ್ಲ ಎಂದರು.

ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರೆ ಎಂದು ವಿಜಯೇಂದ್ರ, ಆರ್.ಅಶೋಕ, ಯತ್ನಾಳ್ ಎಲ್ಲರೂ ಬೊಬ್ಬೆ ಹೊಡೆಯುತ್ತಿದ್ದಾರೆ. ರಾಜ್ಯದ ಜನರ ನೈತಿಕ ಶಕ್ತಿ ನನ್ನ ಜೊತೆಗೆ ಇರುವವರೆಗೂ ನಾನು ಬಿಜೆಪಿ ಪರಿವಾರದ ಷಡ್ಯಂತ್ರಕ್ಕೆ ಹೆದರುವ, ಬೆದರುವ ಪ್ರಶ್ನೆಯೇ ಇಲ್ಲ. ನಮ್ಮ ಸರ್ಕಾರ ಐದಕ್ಕೆ ಐದೂ ವರ್ಷ ಪೂರೈಸುವುದು ಶತಸಿದ್ದ ಎಂದರು.

ವಕ್ಪ್ ಆಸ್ತಿ ಸರ್ಕಾರದ ಆಸ್ತಿ ಅಲ್ಲ. ಅದು ವಕ್ಪ್ ಬೋರ್ಡ್​ಗೆ ಸೇರಿದ ಆಸ್ತಿ. ಈ ಆಸ್ತಿ ಒತ್ತುವರಿ ಮಾಡಿದವರನ್ನು ತೆರವುಗೊಳಿಸಲು ಯಡಿಯೂರಪ್ಪ, ಬೊಮ್ಮಾಯಿ, ಕುಮಾರಸ್ವಾಮಿ ಅವಧಿಯಲ್ಲೂ ನೋಟಿಸ್ ನೀಡಿದ್ದಾರೆ. ಒತ್ತುವರಿ ತೆರವುಗೊಳಿಸಿದ್ದಾರೆ. ಆದರೆ, ನಮ್ಮ ಸರ್ಕಾರದಲ್ಲಿ ಮಾತ್ರ ಯಾವುದೇ ರೈತರಿಗೂ ತೊಂದರೆ ಆಗುವುದಿಲ್ಲ ಎಂದು ಭರವಸೆ ನೀಡಿ ನೋಟಿಸ್ ವಾಪಾಸ್ ಪಡೆಯಲು ಸ್ಪಷ್ಟ ನಿರ್ದೇಶನ ನೀಡಿದ್ದೇನೆ ಎಂದರು.

ಅಭ್ಯರ್ಥಿ ಯಾಶೀರಖಾನ್ ಪಠಾಣ ಮಾತನಾಡಿದರು. ಮುಖ್ಯ ಸಚೇತಕ ಸಲಿಂಅಹ್ಮದ, ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಸಚಿವರಾದ ಎಚ್.ಕೆ.ಪಾಟೀಲ, ಸತೀಶ ಜಾರಕಿಹೊಳಿ, ಈಶ್ವರ ಖಂಡ್ರೆ, ಶಾಸಕ ಬಸವರಾಜ ಶಿವಣ್ಣನವರ, ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ಹಾಗೂ ಇತರರು ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಂಜೀವ ನೀರಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಂ.ಜೆ.ಮುಲ್ಲಾ ಹಾಗೂ ಇತರರು ಪಾಲ್ಗೊಂಡಿದ್ದರು.

Share This Article

ಈ ಕಾಯಿಲೆಯಿಂದ ಬಳಲುತ್ತಿರುವವರು ಸಿಹಿ ಗೆಣಸಿನಿಂದ ದೂರವಿರಿ; ಇಲ್ಲಿದೆ ಹೆಲ್ತಿ ಮಾಹಿತಿ | Health Tips

ಸಿಹಿ ಗೆಣಸು ಯಾರಿಗೆ ಇಷ್ಟವಿರುವುದಿಲ್ಲ ಹೇಳಿ. ರುಚಿಕರವಾದ ಸಿಹಿಗೆಣಸನ್ನು ಶೀತ ಋತುವಿನಲ್ಲಿ ಕಂಡುಬರುವ ಬೇರು ತರಕಾರಿ…

ಗಿಡಗಳನ್ನು ಹಸಿರಾಗಿಡಲು ಕಡಲೆಕಾಯಿ ಸಿಪ್ಪೆ ಪ್ರಯೋಜನಕಾರಿ; ಇಲ್ಲಿದೆ ಬಳಸುವ ವಿಧಾನ | Tips

ಚಳಿಗಾಲದಲ್ಲಿ ಸಸ್ಯಗಳಿಗೆ ಹೆಚ್ಚಿನ ಕಾಳಜಿ ಬೇಕು. ಏಕೆಂದರೆ ತಂಪಾದ ಗಾಳಿ ಮತ್ತು ಇಬ್ಬನಿಯಿಂದ ತೇವಾಂಶವು ಹೆಚ್ಚಾಗುವುದರಿಂದ…

Kurukshetra | ಕುರುಕ್ಷೇತ್ರ ಯುದ್ಧದ ಕೊನೆಯಲ್ಲಿ ರಣಭೂಮಿಗೆ ದ್ರೌಪದಿಯನ್ನು ಶ್ರೀಕೃಷ್ಣ ಕರೆತಂದಿದ್ದೇಕೆ; ಪರಮಾತ್ಮ ಹೇಳಿದ್ದೇನು?

ಕುರುಕ್ಷೇತ್ರ(Kurukshetra) ಯುದ್ಧದಲ್ಲಿ ಎಲ್ಲಾರೂ ಮರಣ ಹೊಂದಲು ಕಾರಣ ಪಾಂಡವರಲ್ಲ ದ್ರೌಪದಿಯ ಕಣ್ಣೀರು. ಕುರುಕ್ಷೇತ್ರ ಯುದ್ಧ ಮುಗಿದ…