More

    ಮಾರ್ಟಳ್ಳಿ ಭಾಗದಲ್ಲಿ ಉತ್ತಮ ಮಳೆ

    ಚಾಮರಾಜನಗರ: ಹನೂರು ತಾಲೂಕಿನ ಮಾರ್ಟಳ್ಳಿ ಭಾಗದಲ್ಲಿ ಬುಧವಾರ ಬೆಳಗ್ಗೆ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಜೋರು ಮಳೆ ಸುರಿದರೆ, ಕೌದಳ್ಳಿ ಭಾಗದಲ್ಲಿ ಸಾಧಾರಣ ಪ್ರಮಾಣದಲ್ಲಿ ಮಳೆಯಾಗಿದೆ.


    ತಾಲೂಕಿನಾದ್ಯಂತ ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆಮಹದೇಶ್ವರ ಬೆಟ್ಟ ಸೇರಿದಂತೆ ಹನೂರು ಪಟ್ಟಣ, ಮಂಗಲ, ಗುಂಡಾಪುರ, ಬಂಡಳ್ಳಿ, ಮಣಗಳ್ಳಿ, ಲೊಕ್ಕನಹಳ್ಳಿ, ರಾಮಾಪುರ ಭಾಗದಲ್ಲಿ ಸುಮಾರು ಒಂದು ಗಂಟೆಗೂ ಅಧಿಕ ಕಾಲ ತುಂತುರು ಹನಿಗಳಿಂದ ಕೂಡಿದ ಮಳೆಯಾಗಿದೆ. ಇತ್ತ ಕೌದಳ್ಳಿ, ಕುರಟ್ಟಿ ಹೊಸೂರು ಹಾಗೂ ಈ ಭಾಗದ ಇನ್ನಿತರ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ.

    ಇನ್ನು ಅಂತರ್ಜಲ ಮಟ್ಟ ಕುಸಿತಗೊಂಡು ತೀವ್ರ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದ ಮಾರ್ಟಳ್ಳಿ ಭಾಗದ ಸಂದನಪಾಳ್ಯ, ವಡ್ಡರದೊಡ್ಡಿ ಹಾಗೂ ಇತರ ಗ್ರಾಮಗಳಲ್ಲಿ ಬೆಳಗ್ಗೆ 8.30ರಲ್ಲಿ ಜೋರು ಮಳೆಯಾಗಿದೆ. ಈ ಭಾಗದಲ್ಲಿ ಇದು ಉತ್ತಮ ಮಳೆಯಾಗಿದ್ದು, ಕೆರೆಕಟ್ಟೆ ಹಾಗೂ ಚೆಕ್ ಡ್ಯಾಂಗಳಲ್ಲಿ ನೀರು ಸಂಗ್ರಹವಾಗಿದೆ. ಇದರಿಂದ ಈ ಭಾಗದಲ್ಲಿ ಅಂತರ್ಜಲ ಮಟ್ಟ ಸುಧಾರಣೆಯಾಗುವ ಭರವಸೆ ಇದೆ. ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನತೆಗೆ ಈ ಮಳೆ ತಂಪು ಅನುಭವ ನೀಡಿದೆ. ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

    ಇನ್ನು ಮಳೆಯಿಂದಾಗಿ ಸಂತ ಮೇರಿಸ್ ಪ್ರೌಢಶಾಲೆಯ ಆವರಣದಲ್ಲಿ ನೀರು ನಿಂತು ಕೆರೆಯಂತಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts