

ಪಡುಬಿದ್ರಿ: ಮಕ್ಕಳು ಮೊಬೈಲ್ ಹಾಗೂ ಇನ್ನಿತರ ಮನೋರಂಜನಾ ವಸ್ತುಗಳ ಕಡೆಗೆ ಹೆಚ್ಚು ಗಮನ ಕೊಡದಂತೆ ಅವರನ್ನು ಸೃಜನಾತ್ಮಕ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಶಿಕ್ಷಕರು ಮಕ್ಕಳಲ್ಲಿ ಸೃಜನಶೀಲತೆ ಬೆಳೆಸಬೇಕು, ಅವರ ಜತೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು ಎಂದು ಉಡುಪಿ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರು ಹೇಳಿದರು.
ಅದಮಾರು ಪೂರ್ಣಪ್ರಜ್ಞ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಾರ್ಷಿಕೋತ್ಸವದಲ್ಲಿ ಗುರುವಾರ ಆಶೀರ್ವಚನ ನೀಡಿದರು.
ಅದಮಾರು ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಗಳ ಗೌರವ ಕೋಶಾಧಿಕಾರಿ ಗಣೇಶ ಹೆಬ್ಬಾರ್ ಅಧ್ಯಕ್ಷತೆ ವಹಿಸಿದ್ದರು. ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎರ್ಮಾಳು ಉದಯ್ ಕೆ.ಶೆಟ್ಟಿ, ಪೂರ್ಣಪ್ರಜ್ಞ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಸಂಜೀವ ನಾಯ್ಕ, ಕನ್ನಡ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಶ್ರೀಕಾಂತ ರಾವ್, ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯ ಶಿಕ್ಷಕ ಮಂಜುನಾಥ ಎ.ವಿ., ವಿದ್ಯಾರ್ಥಿ ನಾಯಕ ಶಮೃತ್ ಉಪಸ್ಥಿತರಿದ್ದರು. ವಿನುತಾ ಸ್ವಾಗತಿಸಿದರು. ಭೂಮಿಕಾ ವಂದಿಸಿದರು. ನಂದನ್ ಆರ್.ರಾವ್ ಕಾರ್ಯಕ್ರಮ ನಿರೂಪಿಸಿದರು.