More

    ಸಂತ ನೋಬರ್ಟ್ ಪದವಿಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

    ತಿ.ನರಸೀಪುರ: ತಾಲೂಕಿನ ಚೌಹಳ್ಳಿಯ ಸಂತ ನೋಬರ್ಟ್ ಪದವಿಪೂರ್ವ ಕಾಲೇಜಿಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ.98.61 ರಷ್ಟು ಉತ್ತಮ ಫಲಿತಾಂಶ ಬಂದಿದೆ.

    ಪರೀಕ್ಷೆ ತೆಗೆದುಕೊಂಡಿದ್ದ ಒಟ್ಟು 73 ವಿದ್ಯಾರ್ಥಿಗಳಲ್ಲಿ 72 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಇವರಲ್ಲಿ 25 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 47 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗಿದ್ದಾರೆ. ಈ ಪೈಕಿ ವಿಜ್ಞಾನ ವಿಭಾಗದಲ್ಲಿ ಶೇ.98ರಷ್ಟು ಫಲಿತಾಂಶ ಬಂದಿದ್ದು, 16 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 33 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಇವರಲ್ಲಿ ಎಂ.ರಚನಾ 573(ಶೇ.95.5), ಜಿ.ಸೌಭಾಗ್ಯಾ 571 (95.1.), ಪವನ್‌ರಾಜ್ 570 (95) ಅಂಕ ಗಳಿಸಿ ಕ್ರಮವಾಗಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಗಳಿಸಿದ್ದಾರೆ.

    ವಾಣಿಜ್ಯ ವಿಭಾಗದಲ್ಲಿ ಶೇ.100 ರಷ್ಟು ಫಲಿತಾಂಶ ದೊರೆತಿದ್ದು, ಇದರಲ್ಲಿ 9 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ, 13 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ಇವರಲ್ಲಿ ಎಂ.ಆರ್.ಉಷಾ 575(95.8), ಬಿ.ಜೀವನ್ 552 (92) ಮೊಹಮ್ಮದ್ ಹ್ಯಾರಿಸ್ 548 (91.33) ಅಂಕ ಗಳಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನ ಪಡೆದಿದ್ದಾರೆ.


    ಹಾಗೆಯೇ 100ಕ್ಕೆ 100 ಅಂಕಗಳನ್ನು ಕನ್ನಡ ಭಾಷೆಯಲ್ಲಿ ಒಬ್ಬ ವಿದ್ಯಾರ್ಥಿನಿ ಹಾಗೂ ಗಣಿತ ವಿಷಯದಲ್ಲಿ 3 ವಿದ್ಯಾರ್ಥಿಗಳು ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ ಎಂದು ಸಂಸ್ಥೆಯ ವ್ಯವಸ್ಥಾಪಕ ರೆವರೆಂಡ್ ಫಾದರ್ ಬೆನ್ನಿ ಥಾಮಸ್, ಖಜಾಂಚಿ ರೆವರೆಂಡ್ ಫಾ. ರೆನಿನ್ ಸಬಾಸ್ಟಿನ್, ಪ್ರಾಂಶುಪಾಲೆ ಲಿಶಾ ಫಜಾನಾ, ಶಿಕ್ಷಣ ಸಂಯೋಜಕರಾದ ರೆವರೆಂಡ್ ಫಾ. ರಾಜೇಶ್ ಮ್ಯಾಥ್ಯೂ ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts