ಜನರಿಗೆ ಉತ್ತಮ ಸೇವೆ

blank

ವಿಜಯವಾಣಿ ಸುದ್ದಿಜಾಲ ಹೆಬ್ರಿ

ನಾವೆಲ್ಲರೂ ಸರ್ಕಾರಿ ಹುದ್ದೆಯಲ್ಲಿರುವುದು ಸಾರ್ವಜನಿಕರ ಸೇವೆ ಮಾಡಲು. ಸೇವೆಯಲ್ಲಿ ವಿಳಂಬವಾದಾಗ ಪ್ರಶ್ನಿಸುವ ಹಕ್ಕಿದೆ. ಇಂದು-ನಾಳೆ ಎಂದು ಸತಾಯಿಸದೆ ಜನರ ಸೇವೆ ಮಾಡಬೇಕು. ಕೆಲವರು ಪ್ರಶ್ನಿಸಿದ್ದನ್ನು ಮಟ್ಟ ಹಾಕಲು ನೋಡುತ್ತಾರೆ. ಇಂತಹ ಬೆಳವಣಿಗೆ ಒಳ್ಳೆಯದಲ್ಲ ಎಂದು ಉಡುಪಿ ಲೋಕಾಯುಕ್ತ ಪ್ರಭಾರ ಡಿವೈಎಸ್ಪಿ ಮಂಜುನಾಥ ಶಂಕ್ರಳ್ಳಿ ಹೇಳಿದರು.

ಹೆಬ್ರಿಯ ತಾಲೂಕು ಆಡಳಿತ ಕಚೇರಿಯಲ್ಲಿ ಬುಧವಾರ ಲೋಕಾಯುಕ್ತ ಜನಸಂಪರ್ಕ ಸಭೆಯಲ್ಲಿ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಅಜೆಕಾರು ವ್ಯವಸಾಯಿಕ ಸೇವಾ ಸಹಕಾರಿ ಸಂಘದ ಹೊಸ ಕಟ್ಟಡ ನಿರ್ಮಾಣ ಮಾಡುವಾಗ ಅವ್ಯವಹಾರ ನಡೆದಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಬೇಕೆಂದು ಕಡ್ತಲ ನಿವಾಸಿ ಆನಂದ ನಾಯಕ್ ದೂರು ನೀಡಿದರು. ಡಿವೈಎಸ್ಪಿ ಪ್ರತಿಕ್ರಿಯಿಸಿ ಸೂಕ್ತ ದಾಖಲೆ ನೀಡಿದರೆ ತನಿಖೆ ನಡೆಸಲಾಗುವುದು ಎಂದರು.

ವಾರಾಹಿ ಯೋಜನೆಯಡಿ ಎಲ್ಲರಿಗೂ ಕುಡಿಯುವ ನೀರಿನಲ್ಲಿ ಲಭ್ಯತೆ ಆಗಬೇಕು. ಈ ಬಗ್ಗೆ ಗ್ರಾಮೀಣ ಕುಡಿಯುವ ನೀರು,ನೈರ್ಮಲ್ಯ ಇಲಾಖಾಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕೆಂದು ಡಿವೈಎಸ್ಪಿ ಸೂಚಿಸಿದರು. ಹೆಬ್ರಿ ತಹಸೀಲ್ದಾರ್ ಎಸ್.ಎ.ಪ್ರಸಾದ್, ಇಒ ಶಶಿಧರ್ ಕೆ.ಜೆ., ವಿವಿಧ ಇಲಾಖೆ ತಾಲೂಕುಮಟ್ಟದ ಅಧಿಕಾರಿಗಳಾದ ಸಿದ್ದೇಶ್ವರ, ಶ್ರೀನಿವಾಸ್ ಬಿ.ವಿ., ಗೋವಿಂದ ನಾಯ್ಕ, ಸುರೇಂದ್ರನಾಥ್, ದಿವಾಕರ ಮರಕಾಲ, ತ್ರಿನೇಶ್ವರ, ಪಿಸ್‌ಎಸ್‌ಐ ಮಹಾಂತೇಶ್ ಜಾಬಗೌಡ, ಸಾರ್ವಜನಿಕರು ಉಪಸ್ಥಿತರಿದ್ದರು.

ಅಧಿಕಾರಿಗಳಿಗೆ ಯಾರಾದರೂ ಫೋನಾಯಿಸಿ, ಲೋಕಾಯುಕ್ತ ಎಂದು ಸುಳ್ಳು ಹೇಳಿ ಹಣ ಕೇಳಿದರೆ ಲಿಖಿತ ರೂಪದಲ್ಲಿ ದೂರು ನೀಡಬೇಕು. ನಾವು ತ್ವರಿತವಾಗಿ ಈ ಬಗ್ಗೆ ಕ್ರಮ ಜರುಗಿಸುತ್ತೇವೆ. ಜಿಲ್ಲೆಯಲ್ಲಿ ಹಲವಾರು ಕಡೆ ಇಂತಹ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು. ಸರ್ವೇ ಕೆಲಸ ಮಾಡುವಾಗ ಅಧಿಕಾರಿಗಳು ಮುತುವರ್ಜಿನ ಮಾಡಬೇಕಾಗಿದೆ. ಈ ಬಗ್ಗೆ ಅನೇಕ ಲೋಪಗಳಾಗಿವೆ ಎಂದರು.
-ಮಂಜುನಾಥ್ ಶಂಕ್ರಳ್ಳಿ, ಡಿವೈಎಸ್ಪಿ

ಸಮಯ ಸದ್ಭಳಕೆಯೊಂದಿಗೆ ಧರ್ಮ ಪರಿಪಾಲನೆ

ಫಲಾನುಭವಿಗಳಿಗೆ ಯೋಜನೆ ತಲುಪಿಸಲು ಸಿದ್ಧತೆ

 

Share This Article

ಈ ಆರೋಗ್ಯ ಸಮಸ್ಯೆ ಇರುವವರು ಅಪ್ಪಿತಪ್ಪಿಯೂ ತುಪ್ಪವನ್ನು ತಿನ್ನಲೇ ಬಾರದು ಗೊತ್ತಾ? ghee benefits and risks

ಬೆಂಗಳೂರು: ( ghee benefits and risks) ಹಾಲಿನ ಉತ್ಪನ್ನಗಳು ಆರೋಗ್ಯಕ್ಕೆ ಒಳ್ಳೆಯದು.  ತುಪ್ಪ ಹಲವು…

ಬಿಸಿಲಿನ ವಾತಾವರಣದಲ್ಲಿ ನಿಮ್ಮ ಕಾರಿನೊಳಗೆ ತಂಪಾಗಿರಲು ಬಯಸುವಿರಾ? ಈ ಟ್ರಿಕ್ ಟ್ರೈ ಮಾಡಿ.. Summer Car Tips

ಬೆಂಗಳೂರು: (Summer Car Tips ) ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಿಸಿಲಿಇಂದ ರಕ್ಷಣೆ ಪಡೆಯಲು…

ಹಠಾತ್ತನೆ ಮದ್ಯಪಾನ ತ್ಯಜಿಸುವುದರಿಂದ ಸಾಯ್ತಾರಾ? ಆಲ್ಕೋಹಾಲ್​ ಬಿಡುವುದಾದ್ರೂ ಹೇಗೆ? ಇಲ್ಲಿದೆ ಉಪಯುಕ್ತ ಮಾಹಿತಿ… | Alcohol

Alcohol: ಮದ್ಯಪಾನದಿಂದ ಉಂಟಾಗುವ ಸಾವುಗಳ ಕುರಿತು ಬ್ರಿಟನ್​ನ ರಾಷ್ಟ್ರೀಯ ಅಂಕಿ ಅಂಶಗಳ ಕಚೇರಿ(ONS) ಅಘತಕಾರಿ ಅಂಕಿ…