ವಿಜಯವಾಣಿ ಸುದ್ದಿಜಾಲ ಕಾಸರಗೋಡು
ಭಾಷಾ ವೈವಿಧ್ಯತೆಯಿಂದ ಕೂಡಿದ ಕಾಸರಗೋಡಿನಲ್ಲಿ ಶ್ರೀ ಎಡನೀರು ಮಠ ಉತ್ತಮ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದೆ ಎಂದು ಮಂಜೇಶ್ವರ ಶಾಸಕ ಎ.ಕೆ.ಎಂ ಅಶ್ರಫ್ ತಿಳಿಸಿದರು.
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ನಾಲ್ಕನೇ ವರ್ಷದ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ಡಾ. ಕೀಲಾರು ಗೋಪಾಲಕೃಷ್ಣಯ್ಯ ಪ್ರತಿಷ್ಠಾನ ವತಿಯಿಂದ ಸೇವಾ ರೂಪದಲ್ಲಿ ನಡೆದ ಶ್ರೀಮದ್ ದೇವೀ ಭಾಗವತ ಸಪ್ತಾಹ ಮತ್ತು ಯಕ್ಷಗಾನ ತಾಳಮದ್ದಳೆ ನವಾಹದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಚನ ನೀಡಿದರು. ಡಾ.ಟಿ.ಶ್ಯಾಮ ಭಟ್ ಸಮಾರೋಪ ಭಾಷಣ ಮಾಡಿದರು. ಚಾತುರ್ಮಾಸ್ಯ ಸಮಿತಿ ಅಧ್ಯಕ್ಷ ಬಲರಾಮ ಆಚಾರ್ಯ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.
ಯಕ್ಷಗಾನದ ಹಿರಿಯ ಕಲಾವಿದ ಕುಂಬಳೆ ಶ್ರೀಧರ ರಾವ್, ಹಿರಿಯ ಯಕ್ಷಗಾನ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ, ಕಲಾವಿದ ಗಂಗಾಧರ ಪುತ್ತೂರು ಅವರ ಸಂಸ್ಮರಣೆ ನಡೆಯಿತು. ಖ್ಯಾತ ಯಕ್ಷಗಾನ ಕಲಾವಿದ ವಾಸುದೇವ ರಂಗಭಟ್ಟ ಸಂಸ್ಮರಣಾ ಭಾಷಣ ಮಾಡಿದರು.
ಕಾಸರಗೋಡು ಶ್ರೀಗೋಪಾಲಕೃಷ್ಣ ಯಕ್ಷಗಾನ ಬೊಂಬೆಯಾಟ ಸಂಘದ ವತಿಯಿಂದ ಮಹಿಷಾಸುರ ವಧೆ ಯಕ್ಷಗಾನ ಬೊಂಬೆಯಾಟ, ಸಂಜೆ ’ಶಾಂಭವೀ ವಿಲಾಸ’ಯಕ್ಷಗಾನ ತಾಳಮದ್ದಳೆ ನಡೆಯಿತು.