More

    ಚುನಾವಣೆಯಲ್ಲಿ ಸೆಂಟ್ರಲ್​ ಕಾರ್ಯಕರ್ತರಿಂದ ಉತ್ತಮ ಕಾರ್ಯ

    ಹುಬ್ಬಳ್ಳಿ : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪರವಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಕಾರ್ಯಕರ್ತರು ಉತ್ತಮ ಕಾರ್ಯನಿರ್ವಹಿಸಿದ್ದಾರೆ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

    ಇಲ್ಲಿನ ಅರವಿಂದ ನಗರದ ಬಿಜೆಪಿ ಕಚೇರಿಯಲ್ಲಿ ಗುರುವಾರ ಆಯೋಜಿಸಿದ್ದ ಚುನಾವಣೆಯಲ್ಲಿ ಹು-ಧಾ ಸೆಂಟ್ರಲ್ ಕ್ಷೇತ್ರದ ಕಾರ್ಯನಿರ್ವಹಣೆ ಕುರಿತ ಸಭೆಯಲ್ಲಿ ಅವರು ಮಾತನಾಡಿದರು.

    ಸೆಂಟ್ರಲ್ ಕ್ಷೇತ್ರದಿಂದ ಹೆಚ್ಚಿನ ಮತಗಳು ಬಿಜೆಪಿಗೆ ಬರಬೇಕು ಎಂಬ ಕಾರಣದಿಂದ ಎಲ್ಲ ಕಾರ್ಯಕರ್ತರು ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಸೆಂಟ್ರಲ್ ಕ್ಷೇತ್ರದ ಅಧ್ಯಕ್ಷ ಹಾಗೂ ಪಾಲಿಕೆ ಸದಸ್ಯ ಸಂತೋಷ ಚವ್ಹಾಣ ಅಧ್ಯಕ್ಷತೆ ವಹಿಸಿದ್ದರು. ಪಾಲಿಕೆ ಸದಸ್ಯೆ ಚಂದ್ರಿಕಾ ಮೇಸ್ತ್ರಿ, ಪಕ್ಷದ ಮುಖಂಡರಾದ ದತ್ತಮೂರ್ತಿ ಕುಲಕರ್ಣಿ, ಸಿದ್ದು ಮುಗಲಿಶೆಟ್ಟರ, ಗೋಪಾಲ ಬದ್ದಿ, ರಾಜು ಕಾಳೆ, ವಸಂತ ನಾಡಜೋಶಿ, ವಿಶ್ವನಾಥ ಪಾಟೀಲ, ಮೋಹನ ಬಡಿಗೇರ, ಡಿ.ಪಿ. ಪಾಟೀಲ, ತೋಟಪ್ಪ ನಿಡುಗುಂದಿ ಹಾಗೂ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts