More

    ಗುಣಮಟ್ಟದ ಬೀಜದಿಂದ ಉತ್ತಮ ಇಳುವರಿ

    ಧಾರವಾಡ: ಕೃಷಿ ವಿಶ್ವವಿದ್ಯಾಲಯದ ಬೀಜ ಘಟಕದ ಬೀಜೋತ್ಪಾದನೆಯ ತಂತ್ರಜ್ಞಾನವು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಹೊಂದಿದೆ.

    ಮುಂಗಾರು ಹಂಗಾಮಿನ ಮುಖ್ಯ ಬೆಳೆಗಳಾದ ಹೆಸರು, ಉದ್ದು, ಭತ್ತ, ಸೋಯಾಅವರೆ, ಶೇಂಗಾ, ಅಲಸಂದಿ, ಸಿರಿಧಾನ್ಯ ಬೀಜಗಳನ್ನು ಖರೀದಿಸಿ ಉತ್ತಮ ಇಳುವರಿ ಪಡೆಯಬೇಕು ಎಂದು ಬೀಜ ಘಟಕದ ವಿಶೇಷ ಅಧಿಕಾರಿ ಡಾ. ರವಿ ಹುಂಜಿ ಹೇಳಿದರು.
    ನಗರದ ಕೃಷಿ ವಿಶ್ವವಿದ್ಯಾಲಯದ ಬೀಜ ಘಟಕದ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ವರ್ಷದ ಅಂಗವಾಗಿ ಗುರುವಾರ ಆಯೋಜಿಸಿದ್ದ ಮುಂಗಾರು ಬೆಳೆಗಳ ಬೀಜ ಮೇಳದಲ್ಲಿ ಅವರು ಮಾತನಾಡಿದರು.

    ಕಾರ್ಯಕ್ರಮ ಉದ್ಘಾಟಿಸಿದ ರಾಯಚೂರು ಕೃಷಿ ವಿವಿ ವಿಶ್ರಾಂತ ಕುಲಪತಿ ಡಾ. ಪಿ.ಎಂ. ಸಾಲಿಮಠ ಮಾತನಾಡಿ, ಕೃಷಿ ವಿವಿಯ ಬೀಜೋತ್ಪಾದನೆ ರಾಷ್ಟ್ರಮಟ್ಟದಲ್ಲಿ ಹೆಸರುವಾಸಿಯಾಗಿದೆ.

    ಇಲ್ಲಿ ಸಿಗುವ ಬಿತ್ತನೆ ಬೀಜ ಖರೀದಿಸಿ ಘಟಕದ ಸದುಪಯೋಗ ಪಡೆದುಕೊಳ್ಳಬೇಕು. ಗುಣಮಟ್ಟದ ಬೀಜಗಳನ್ನು ಖರೀದಿಸಿ ಹೆಚ್ಚುವರಿ ಇಳುವರಿ ಪಡೆಯಬಹುದು.

    ಎಣ್ಣೆಕಾಳು, ದ್ವಿದಳ ಧಾನ್ಯಗಳ ಆಮದನ್ನು ಕಡಿಮೆ ಮಾಡಲು ರೈತರು ಹೆಚ್ಚಿನ ಪ್ರಮಾಣದಲ್ಲಿ ಈ ಬೆಳೆಗಳನ್ನು ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಬೆಳೆಯಬೇಕು.

    ಪ್ರತಿವರ್ಷ ಉತ್ತಮ ಗುಣಮಟ್ಟದ ಬೀಜ ಉಪಯೋಗಿಸಿದರೆ ಜಿಡಿಪಿಯನ್ನು ಹೆಚ್ಚಿಸಿ ರೈತರ ಆದಾಯವನ್ನು ದ್ವಿಗುಣಗೊಳಿಸಬಹುದು ಎಂದರು.
    ಕೃಷಿ ವಿವಿ ಸಂಶೋಧನಾ ನಿರ್ದೇಶಕ ಡಾ. ಬಿ.ಡಿ. ಬಿರಾದಾರ ಅವರು ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಶಿಕ್ಷಣ ನಿರ್ದೇಶಕ ಡಾ. ವಿ.ಆರ್. ಕಿರೇಸೂರ ಅಧ್ಯಕ್ಷತೆ ವಹಿಸಿದ್ದರು. 250ಕ್ಕೂ ಹೆಚ್ಚು ರೈತರು ಬಿತ್ತನೆ ಬೀಜಗಳನ್ನು ಖರೀದಿಸಿದರು.

    ವಿಸ್ತರಣಾ ನಿರ್ದೇಶಕ ಡಾ. ಎ.ಎಸ್. ವಸದ, ಹಣಕಾಸು ನಿಯಂತ್ರಣಾಧಿಕಾರಿ ಎಸ್.ಎಂ. ಹೊನ್ನಳ್ಳಿ, ವ್ಯವಸ್ಥಾಪನಾ ಮಂಡಳಿಯ ಸದಸ್ಯ ವೈ.ಎನ್. ಪಾಟೀಲ ಹಾಗೂ ವಿಜ್ಞಾನಿಗಳು, ಬೀಜ ಘಟಕದ ಸಿಬ್ಬಂದಿ ಇದ್ದರು. ಡಾ. ಎಸ್.ಎಂ. ಹಿರೇಮಠ ವಂದಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts