ಎರಡು ಗೂಡ್ಸ್ ರೈಲುಗಳ ಮಧ್ಯೆ ಡಿಕ್ಕಿ; ಹಳಿ ತಪ್ಪಿದ 12 ಬೋಗಿಗಳು

Train
Published on

ಪಶ್ಚಿಮ ಬಂಗಾಳ: ಬಾಲಸೋರ್​ನಲ್ಲಿ ಸಂಭವಿಸಿದ ತ್ರಿವಳಿ ರೈಲು ಅಪಘಾತದಲ್ಲಿ ನೂರಾರು ಮಂದಿ ಸಾವನ್ನಪ್ಪಿದ ಘಟನೆ ಮಾಸುವ ಮುನ್ನವೇ ಮತ್ತೊಂದು ರೈಲು ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ 4 ಗಂಟೆ ಸುಮಾರಿಗೆ ಓಂಡಾ ರೈಲು ನಿಲ್ದಾಣದ ಬಳಿ ಎರಡು ಗೂಡ್ಸ್​ ರೈಲುಗಳ ನಡುವೆ ಅಪಘಾತವಾಗಿದೆ. ಘಟನೆಯಲ್ಲಿ ಗೂಡ್ಸ್​ ರೈಲಿನ ಲೋಕೊ ಪೈಲಟ್ ಗಾಯಗೊಂಡಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಒಂದು ಗೂಡ್ಸ್ ರೈಲು, ಇನ್ನೊಂದಕ್ಕೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಸುಮಾರು ಸುಮಾರು 12 ಬೋಗಿಗಳು ಹಳಿ ತಪ್ಪಿವೆ. ಅವಘಡದ ಬಳಿಕ ಖರಗ್​ಪುರ-ಬಂಕುರಾ-ಆದ್ರಾ ಮಾರ್ಗದಲ್ಲಿ ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

'ಪ್ರಾಥಮಿಕ ಮಾಹಿತಿಯ ಪ್ರಕಾರ, ಒಂದು ಗೂಡ್ಸ್ ರೈಲು, ಮತ್ತೊಂದು ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದೆ. ಮುಂದಿನ ತನಿಖೆಯ ನಂತರ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಲಾಗುವುದು' ಎಂದು ಓಂಡಾ ನಿಲ್ದಾಣದ ಸುರಕ್ಷತಾ ಅಧಿಕಾರಿ ದಿಬಾಕರ್ ಮಜ್ಹಿ ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net