More

  ಎಳನೀರು ಚಿಪ್ಪು ಸಾಗಿಸುತ್ತಿದ್ದ ಗೂಡ್ಸ್ ವಾಹನ ಪಲ್ಟಿ

  ಕೊಳ್ಳೇಗಾಲ : ತಾಲೂಕಿನ ಧನಗೆರೆ ಗ್ರಾಮದ ಬಳಿ ಚಲಿಸುತ್ತಿದ್ದ ಎಳನೀರು ಚಿಪ್ಪು ಸಾಗಿಸುತ್ತಿದ್ದ ಬೊಲೆರೋ ಪಿಕ್‌ಅಪ್ ವಾಹನ ಪಲ್ಟಿಯಾಗಿದ್ದು, ವಾಹನದಲ್ಲಿದ್ದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಾಲಕ ಮಹೇಂದ್ರ ಹಾಗೂ ಕ್ಲೀನರ್ ಗಣೇಶ್ ಅಪಾಯದಿಂದ ಪಾರಾದವರು. ಬೆಂಗಳೂರು ಕಡೆಯಿಂಡ ಕೊಳ್ಳೇಗಾಲದ ಕಡೆಗೆ ಬರುತ್ತಿದ್ದ ಎಳನೀರು ಚಿಪ್ಪು ತುಂಬಿದ ಬೊಲೆರೋ ಪಿಕ್‌ಅಪ್ ಧನಗೆರೆ ಗ್ರಾಮದ ಬಳಿ ವಾಹನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು ಇದಕ್ಕಿಂತದಂತೆ ಪಲ್ಟಿ ಹೊಡೆದಿದೆ. ಪರಿಣಾಮ ಎಳನೀರು ಚಿಪ್ಪುಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿವೆ. ವಾಹನ ಚಾಲಕ ಹಾಗೂ ಕ್ಲಿನರ್‌ಗೆ ಸಣ್ಣಪುಟ್ಟ ಗಾಯವಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಚಾರ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳೀಯರ ಸಹಾಯದಿಂದ ರಸ್ತೆಯಲ್ಲಿ ಬಿದ್ದಿದ್ದ ಎಳನೀರು ಚಿಪ್ಪುಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅವಕಾಶ ಮಾಡಿಕೊಟ್ಟರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts