ಮರೆಯಾಯ್ತು ಕನ್ನಡದ ಮತ್ತೊಂದು ಅಮೂಲ್ಯ ರತ್ನ: ನಿಘಂಟು ತಜ್ಞ ಪ್ರೊ.‌ ಜಿ. ವೆಂಕಟಸುಬ್ಬಯ್ಯ ನಿಧನ

blank

ಬೆಂಗಳೂರು: ನಿಘಂಟು ತಜ್ಞ ಪ್ರೊ.‌ ಜಿ. ವೆಂಕಟಸುಬ್ಬಯ್ಯ ಅವರು ಸೋಮವಾರ ಬೆಳಗ್ಗೆ 1.30ರ ಸುಮಾರಿಗೆ ಜಯನಗರದ ಖಾಸಗಿ ಆಸ್ಪತ್ರೆಯಲ್ಲಿ ವಯೋ ಸಹಜ ಕಾರಣಗಳಿಂದ ಕೊನೆಯುಸಿರೆಳೆದಿದ್ದಾರೆ.

ನಾಡೋಜ ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಖ್ಯಾತ ವಿದ್ವಾಂಸರು ಹಾಗೂ ಜನಪ್ರಿಯ ಪ್ರಾಧ್ಯಾಪಕರು. ಪ್ರೊ. ಜಿ. ವೆಂಕಟಸುಬ್ಬಯ್ಯ ಅವರು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಸುವರ್ಣ ಪದಕದೊಡನೆ ಎಂ.ಎ. ಪದವಿ, ನಂತರ ಬಿ.ಟಿ. ಪದವಿ ಗಳಿಕೆ. ಮಹಾರಾಜ ಕಾಲೇಜಿನಲ್ಲಿ ಉಪನ್ಯಾಸಕರಾಗಿ ವೃತ್ತಿಯನ್ನು ಆರಂಭಿಸಿ, ನಂತರ ಬೆಂಗಳೂರಿನ ವಿಜಯಾ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ, ಪ್ರಿನ್ಸಿಪಾಲರಾಗಿ, ಸೇವೆ ಸಲ್ಲಿಸಿ ನಿವೃತ್ತಿ ಪಡೆದರು.

ಇದನ್ನೂ ಓದಿರಿ: ಕರೊನಾ ಎಫೆಕ್ಟ್​: ಪದವಿ, ಸ್ನಾತಕೋತ್ತರ ವಿದ್ಯಾರ್ಥಿಗಳು ಮನೆಯಲ್ಲಿಯೇ ಕುಳಿತು ಪುಸ್ತಕ ನೋಡಿ ಪರೀಕ್ಷೆ ಬರೀಬೋದು!

ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ-ಕನ್ನಡ ನಿಘಂಟುವಿನ ಪ್ರಧಾನ ಸಂಪಾದಕರಾಗಿ ಸೇವೆ ಸಲ್ಲಿಸಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ, ಕನ್ನಡ ಸಾಹಿತ್ಯ ಪರಿಷತ್ತಿಗೆ ಅಖಿಲ ಕರ್ನಾಟಕ ವ್ಯಾಪ್ತಿಯನ್ನು ತಂದುಕೊಟ್ಟ ಹಿರಿಮೆ ಶ್ರೀಯುತರಿಗೆ ಸಲ್ಲುತ್ತದೆ.

ನಡೆದಾಡುವ ನಿಘಂಟು, ಶಬ್ಧ ಬ್ರಹ್ಮ ಎಂದು ಜನಜನಿತರಾಗಿರುವ ಶ್ರೀಯುತರು ಸಾಹಿತ್ಯ ವಿಮರ್ಶೆ, ಸಂಶೋಧನೆ, ಅನುವಾದ, ನಿಘಂಟು ರಚನೆ ಕ್ಷೇತ್ರಗಳಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ. 50 ಪುಸ್ತಕಗಳು, 14 ನಿಘಂಟುಗಳನ್ನು ಪ್ರಕಟಗೊಳಿಸಿರುವುದಲ್ಲದೆ ‘ಇಗೋ ಕನ್ನಡ’ ಎಂಬ ಅಂಕಣದಿಂದ ನಾಡಿನಲ್ಲಿ ಮನೆಮಾತಾಗಿದ್ದಾರೆ.

ನಿಘಂಟು ಪರಿವಾರ, ಅಕ್ರೂರ ಚರಿತ್ರೆ (ಸಂಪಾದನೆ), ಇಗೋ ಕನ್ನಡ (ಸಾಮಾಜಿಕ ನಿಘಂಟು), ಗತಿ ಪ್ರಜ್ಞೆ, ಕನ್ನಡವನ್ನು ಉಳಿಸಿ ಬೆಳೆಸಿದವರು, ಅನುಕಲ್ಪನೆ, ಕರ್ಣ ಕರ್ಣಾಮೃತ ಮುಂತಾದವು ಪ್ರಮುಖ ಕೃತಿಗಳು.

ಹಲವಾರು ಶಿಕ್ಷಕ ತರಬೇತಿ ಕಾಲೇಜುಗಳಲ್ಲಿ ಆಹ್ವಾನಿತ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿರುವ ಶ್ರೀಯುತರ ಪಾಂಡಿತ್ಯಕ್ಕೆ ಸಂದ ಪ್ರಶಸ್ತಿ ಪುರಸ್ಕಾರಗಳು ಹಲವಾರು. ಅವುಗಳಲ್ಲಿ ವಿದ್ಯಾಲಂಕಾರ ಪ್ರಶಸ್ತಿ, ರಾಜ್ಯೋತ್ಸವ ಪ್ರಶಸ್ತಿ, ಶಂಬಾ ಪ್ರಶಸ್ತಿ, ಸೇಡಿಯಾಪು ಪ್ರಶಸ್ತಿ, ಕಾಯಕ ಪ್ರಶಸ್ತಿ, ಪತ್ರಿಕಾ ಅಕಾಡೆಮಿ ವಿಶೇಷ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಹಂಪಿ ವಿಶ್ವವಿದ್ಯಾನಿಲಯದ ನಾಡೋಜ ಪ್ರಶಸ್ತಿ, ಅಂತರಾಷ್ಟ್ರೀಯ ನಿಘಂಟು ಸಮ್ಮೇಳನಗಳಿಗೆ ಆಹ್ವಾನ ಮುಂತಾದವು ಮುಖ್ಯವಾದವು.

ಜಿ.ವಿ. ಎಂದೇ ಖ್ಯಾತರಾದ ಪ್ರೊ|| ಜಿ. ವೆಂಕಟಸುಬ್ಬಯ್ಯ ಅವರು ಅತ್ಯುತ್ತಮ ಭಾಷಣಕಾರರು ಹಾಗೂ ಸರಳ ಸಜ್ಜನಿಕೆಯ ವಿದ್ವಾಂಸರು ಇಂದು ಅಗಲಿದ್ದಾರೆ

ಮತ್ತೆ ನಷ್ಟದ ಭೀತಿ; ಉದ್ಯಮಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಲಿ

ಸಹಾಯ ಮಾಡುವ ಗುಣವೇ ಶ್ರೇಷ್ಠ; ಮನೋಲ್ಲಾಸ

Share This Article

ಕಾಲುಗಳ ಮಧ್ಯೆ ದಿಂಬು ಇಟ್ಟುಕೊಂಡು ಮಲಗುತ್ತೀರಾ? ಪ್ರಯೋಜನಗಳಿವೆ.. ನೀವು ಟ್ರೈ ಮಾಡಿ ನೋಡಿ.. Sleeping With Pillow Between Legs

Sleeping With Pillow Between Legs : ನಿದ್ದೆ ಮಾಡುವಾಗ ಪ್ರತಿಯೊಬ್ಬರಿಗೂ ವಿಭಿನ್ನ ಅಭ್ಯಾಸಗಳಿರುತ್ತವೆ.  ಕೆಲವರು…

ಪ್ರತಿದಿನ ರೇಷನ್​ ಅಕ್ಕಿ ತಿಂದರೆ ಏನಾಗುತ್ತೆ ಗೊತ್ತಾ? ಇಲ್ಲಿದೆ ನೋಡಿ ಅಚ್ಚರಿಯ ಮಾಹಿತಿ! Ration Rice

Ration Rice : ಪ್ರತಿ ಕೆಜಿಗೆ ಕೇವಲ ಒಂದು ರೂಪಾಯಿಗೆ ಮಾರಾಟವಾಗುವ ಅಥವಾ ಸರ್ಕಾರ ಉಚಿತವಾಗಿ…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಉಪ್ಪು ನೀರು ಕುಡಿಯುವುದರಿಂದ ಏನು ಪ್ರಯೋಜನ; ಇಲ್ಲಿದೆ ನಿಮಗಾಗಿ ಹೆಲ್ತಿ ಮಾಹಿತಿ | Health Tips

ಬೆಳಗ್ಗೆ ಎದ್ದ ನಂತರ ನೀರು ಕುಡಿಯುವ ಅಭ್ಯಾಸವು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಪರಿಗಣಿಸಲಾಗುತ್ತದೆ. ಆದರೆ…