More

    ’10 ತಿಂಗಳ ಬಳಿಕ ಆರೋಪವೇಕೆ’?: ಗೂಳಿಹಟ್ಟಿ ಶೇಖರ್ ವೈರಲ್ ಆಡಿಯೋ ಕುರಿತು ಸ್ಪಷ್ಟನೆ ಕೊಟ್ಟ ಆರ್‌ಎಸ್‌ಎಸ್‌ ನಾ. ತಿಪ್ಪೇಸ್ವಾಮಿ

    ಬೆಂಗಳೂರು: “ಪರಿಶಿಷ್ಠ ಜಾತಿಯವನು ಎಂಬ ಕಾರಣಕ್ಕೆ ನಾಗಪುರದ ಹೆಡಗೇವಾರ್ ವಸ್ತು ಸಂಗ್ರಹಾಲಯದ ಪ್ರವೇಶ ನಿರಾಕರಿಸಿದ್ದಾರೆ” ಎಂದು ಹೊಸದುರ್ಗ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಆರೋಪಿಸಿದ್ದರು. ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ, ಆರ್‌ಎಸ್‌ಎಸ್‌ ಮುಖಂಡ ಬಿ.ಎಲ್. ಸಂತೋಷ್ ಅವರಲ್ಲಿ ಮನವಿ ಮಾಡಿಕೊಂಡಿರುವ ಆಡಿಯೋ ಎಲ್ಲೆಡೆ ವೈರಲ್ ಆಗಿತ್ತು.

    ಇದೀಗ ಈ ಕುರಿತು ಆರ್‌ಎಸ್‌ಎಸ್‌ನ ನಾ. ತಿಪ್ಪೇಸ್ವಾಮಿ ಸ್ಪಷ್ಟನೆ ನೀಡಿದ್ದು, ಗೂಳಿಹಟ್ಟಿ ಶೇಖರ್ ಆರೋಪ ನಿರಾಧಾರ, ಅವರು ಹೇಳಿದ ಯಾವುದೇ ಘಟನೆ ನಡೆದಿಲ್ಲ. ನಾಗಪುರದ ಸಂಘದ ಕೇಂಧ್ರದಲ್ಲಿ ಎಲ್ಲರಿಗೂ ಅವಕಾಶ ಇದೆ, 10 ತಿಂಗಳ ಬಳಿಕ ಈಗ ಆರೋಪ ಏಕೆ ಎಂದು ತಿಳಿಸಿದ್ದಾರೆ.

    ಆಡಿಯೋ ವೈರಲ್
    ಬಿ.ಎಲ್. ಸಂತೋಷ್ ಅವರಿಗೆ ಗೂಳಿಹಟ್ಟಿ ಶೇಖರ್ ಆಡಿಯೋ ಸಂದೇಶ ಕಳುಹಿಸಿದ್ದಾರೆ ಎನ್ನಲಾಗಿದ್ದು, ಆಡಿಯೋದಲ್ಲಿ ಶೇಖರ್, “ಚುನಾವಣೆ ಘೋಷಣೆಯಾಗುವುದಕ್ಕೂ ಎರಡು ತಿಂಗಳ ಮುಂಚೆ ಸ್ನೇಹಿತರ ಜತೆಗೆ ಬಹಳ ಸಂತೋಷದಿಂದ ಮಹಾರಾಷ್ಟ್ರದ ನಾಗಪುರದ ಆರೆಸ್ಸೆಸ್ ಹೆಡಗೇವಾರ್ ವಸ್ತುಸಂಗ್ರಾಹಲಯಕ್ಕೆ ಖುಷಿಯಿಂದ ಭೇಟಿ ನೀಡಿದ್ದೆ. ಪರಿಶಿಷ್ಟ ಜಾತಿಗೆ ಸೇರಿದವನಾದರೂ ಹಿಂದುತ್ವದ ಬಗ್ಗೆ ನನಗೆ ಹೆಮ್ಮೆ ಇದೆ. ಹೆಡಗೇವಾರ್ ಬಗ್ಗೆ ತಿಳಿದುಕೊಳ್ಳುವ ಆಸಕ್ತಿಯಿಂದ ವಸ್ತುಸಂಗ್ರಹಾಲಯಕ್ಕೆ ತೆರಳಿದಾಗ ನನ್ನನ್ನು ಪರಿಶಿಷ್ಟ ಜಾತಿಯವನಾ ಎಂದು ಕೇಳಿದರು, ನಾನು ಹೌದು ಎಂದಿದ್ದಕ್ಕೆ ಪ್ರವೇಶ ನಿರಾಕರಿಸಲಾಯಿತು. ಇದರಿಂದ ನನಗೆ ಬಹಳ ನೋವಾಗಿದೆ.

    ವಸ್ತುಸಂಗ್ರಹಾಲಯ ವೀಕ್ಷಣೆಗೆ ಬರುವವರ ಮಾಹಿತಿಯನ್ನು ಪ್ರವೇಶ ದ್ವಾರದಲ್ಲಿ ಸಂಗ್ರಹಿಸಲಾಗುತ್ತಿತ್ತು. ಪುಸ್ತಕದಲ್ಲಿ ಹೆಸರು ನೋಂದಾಯಿಸಿ ಒಳಗೆ ಹೆಜ್ಜೆ ಇಡುತ್ತಿದ್ದಾಗ ವ್ಯಕ್ತಿಯೊಬ್ಬರು ತಡೆದರು. ತಪ್ಪು ತಿಳಿಯಬೇಡಿ, ನೀವು ಮೀಸಲಾತಿ ಪಡೆದುಕೊಳ್ಳುವ ಜಾತಿಗೆ ಸೇರಿದ್ದೀರಾ ಎಂದು ಕೇಳಿದರು. ನಾನು ಹೌದು ಎಂದಿದ್ದಕ್ಕೆ ನನಗೆ ಪ್ರವೇಶ ನಿರಾಕರಿಸಿದರು. ನನ್ನೊಂದಿಗೆ ಇಬ್ಬರು ಸ್ನೇಹಿತರು ಬಂದಿದ್ದರು. ಅವರು ಮಾತ್ರ ಒಳಗೆ ಹೋದರು. ನಾನು, ಹೊರಗೆ ಕಾಯುತ್ತಾ ಕುಳಿತುಕೊಂಡೆ. ಗೋವಿಂದ ಕಾರಜೋಳ ಹಾಗೂ ಸಂಸದ ಆನೇಕಲ್ ನಾರಾಯಣಸ್ವಾಮಿ ಅವರಿಗೂ ಪ್ರವೇಶ ನಿರಾಕರಿಸಲಾಗಿತ್ತಾ? ಇದಕ್ಕೆ ಕಾರಣ ಏನು ಎಂಬುದನ್ನು ಸ್ಪಷ್ಟಪಡಿಸಬೇಕು” ಎಂದು ಸಂತೋಷ್ ಅವರಲ್ಲಿ ಮನವಿ ಮಾಡಿದ್ದರು.

    ಎಸ್​​​ಸಿ ಎಂಬ ಕಾರಣಕ್ಕೆ ಗೂಳಿಹಟ್ಟಿ ಶೇಖರ್​​​ಗೆ RSS ಕಚೇರಿಗೆ ಪ್ರವೇಶ ನಿರಾಕರಣೆ: ಸ್ಪಷ್ಟನೆ ನೀಡುವಂತೆ ಬಿ.ಎಲ್.ಸಂತೋಷ್​​ಗೆ ಮನವಿ

     

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts