ಕಾರ್ಮಿಕ ಇಲಾಖೆ ವ್ಯಾಪ್ತಿಗೆ ಪಿಗ್ಮಿ ಸಂಗ್ರಹಕಾರರು

sgr pgymy

ಸಾಗರ: ಹಣಕಾಸು ಸಂಸ್ಥೆಗಳ ಜೀವನಾಡಿ, ಜನಸ್ನೇಹಿ ಪಿಗ್ಮಿ ಸಂಗ್ರಹಕಾರರಿಗೆ ಸರ್ಕಾರದಿಂದ ಸೌಲಭ್ಯ ಕೊಡಿಸುವ ನಿಟ್ಟಿನಲ್ಲಿ ಗಂಭೀರ ಪ್ರಯತ್ನ ಮಾಡುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ ನೀಡಿದರು.
ಸಾಗರ ತಾಲೂಕು ಪಿಗ್ಮಿ ಸಂಗ್ರಹಕಾರರ ಸಂಘ ಭಾನುವಾರ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶ್ರಮಿಜೀವಿಗಳಾದ ಪಿಗ್ಮಿ ಸಂಗ್ರಹಕಾರರನ್ನು ಕಾರ್ಮಿಕ ಇಲಾಖೆಯೊಳಗೆ ತರುವಲ್ಲಿ ಕಾರ್ಮಿಕ ಸಚಿವರೊಂದಿಗೆ ಚರ್ಚಿಸುತ್ತೇನೆ ಎಂದರು.
ಊರಿಗೆ ಕೀರ್ತಿ ತಂದವರನ್ನು ಗೌರವಿಸುವುದು ಹೆಮ್ಮೆಯ ಸಂಗತಿ. ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ಸಿಗುತ್ತಿದೆ. ಹಲವು ಸರ್ಕಾರಿ ಶಾಲೆಗಳಲ್ಲಿ ಶೇ.100 ಫಲಿತಾಂಶ ಬರುತ್ತಿದೆ. ಕಷ್ಟದಲ್ಲಿ ಬದುಕು ಕಟ್ಟಿಕೊಂಡಿರುವ ಪಿಗ್ಮಿ ಸಂಗ್ರಹಕಾರರು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಪುರಸ್ಕರಿಸುತ್ತಿರುವುದು, ಸಾಧಕರನ್ನು ಗೌರವಿಸುತ್ತಿರುವುದು ಮಾದರಿ ಎಂದರು.
ಸಾಮಾಜಿಕ ಕಾರ್ಯಕರ್ತ ಮ.ಸ.ನಂಜುಂಡಸ್ವಾಮಿ ಮಾತನಾಡಿ, ಮಕ್ಕಳನ್ನು ವಿದ್ಯಾವಂತರನ್ನಾಗಿ ಮಾಡುವ ಜತೆಗೆ ಸಂಸ್ಕಾರ ಕೊಡಬೇಕು. ಅವರಲ್ಲಿ ಸಾಮಾಜಿಕ ಪ್ರಜ್ಞೆ ಬೆಳೆಸಬೇಕು. ವಿದ್ಯಾಭ್ಯಾಸದ ಹಂತದಲ್ಲಿ ಸಮಾಜದಿಂದ ನೆರವು ಪಡೆದ ವಿದ್ಯಾರ್ಥಿಗಳು ಮುಂದೆ ಉನ್ನತ ಸ್ಥಾನಕ್ಕೆ ಹೋದಾಗ ಸಮಾಜಕ್ಕೆ ಮರಳಿ ಸಹಾಯ ಮಾಡಬೇಕು ಎಂದು ಹೇಳಿದರು.
ಸೇವಾಸಾಗರ ವಿದ್ಯಾಸಂಸ್ಥೆ ಕಾರ್ಯದರ್ಶಿ ಗೋಪಾಲಕೃಷ್ಣ ಮಾತನಾಡಿ, ಭಾವನಾತ್ಮಕ ಸಂಬಂಧ ದೂರವಾಗುತ್ತಿರುವ ಸಂದರ್ಭದಲ್ಲಿ ಮಕ್ಕಳಲ್ಲಿ ಈ ಪ್ರಜ್ಞೆಯನ್ನು ಬೆಳೆಸಬೇಕು. ಮೊಬೈಲ್ ಪಿಡುಗಿನಿಂದ ಮಕ್ಕಳನ್ನು ಹೊರತರಬೇಕು ಎಂದರು.
ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಎಸ್‌ಎಸ್‌ಎಲ್‌ಸಿಯಲ್ಲಿ ಶೇ.100 ಫಲಿತಾಂಶ ದಾಖಲಿಸಿದ ಶಾಲೆಗಳ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು. ಬಾಲ ಪ್ರತಿಭೆಗಳಾದ ದಿಯಾ ಹೆಗಡೆ, ಮಹಾಲಕ್ಷ್ಮೀ, ಕೀರ್ತನಾರನ್ನು ಸನ್ಮಾನಿಸಲಾಯಿತು. ಪಿಗ್ಮಿ ಸಂಗ್ರಹಕಾರರ ಸಂಘದ ಅಧ್ಯಕ್ಷ ಎಸ್.ಕೆ.ಪ್ರಭು, ಹಿರಿಯ ಸದಸ್ಯರಾದ ಅರುಣಕುಮಾರ್, ಎಂ.ಡಿ.ಮಂಜುನಾಥ್ ಎನ್.ಎಚ್.ಚಂದ್ರಶೇಖರ್, ರಾಜೇಶ ಭಡ್ತಿ, ಬಿ.ನಾಗರಾಜ ಇದ್ದರು.

Share This Article

Raw Milkನಿಂದ ಹೊಳೆಯುವ ತ್ವಚೆ! ಹಸಿ ಹಾಲಿನಲ್ಲಿ ಇವುಗಳನ್ನು ಬೆರೆಸಿ ಹಚ್ಚಿಕೊಳ್ಳಿ ಸಾಕು..

Raw Milk Beauty Tips: ಹಾಲು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎಂದು ನಮಗೆಲ್ಲರಿಗೂ ತಿಳಿದಿದೆ. ಹಾಲು…

Health Tips | ಕರಿಬೇವು ತಿನ್ನುವುದರಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ: ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ..

ಅಡುಗೆಯಲ್ಲಿ ರುಚಿ ಮತ್ತು ಸುವಾಸನೆಯನ್ನು ಹೆಚ್ಚಿಸುವ ಸಲುವಾಗಿ ಕರಿಬೇವನ್ನು ಉಪಯೋಗಿಸುತ್ತಾರೆ. ಇದರಿಂದ ಆರೋಗ್ಯಕ್ಕೂ ಎಷ್ಟೆಲ್ಲಾ ಪ್ರಯೋಜನ…