More

    ಗೊರವನಹಳ್ಳಿ ದೇಗುಲ ಸೀಲ್​ಡೌನ್, ವರಮಹಾಲಕ್ಷ್ಮೀ ಹಬ್ಬಕ್ಕೆ ತೆರೆಯುವುದು ಅನುಮಾನ!

    ಕೊರಟಗೆರೆ: ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲಕ್ಕೂ ಕರೊನಾ ಛಾಯೆ ಆವರಿಸಿದ್ದು, ದೇವಸ್ಥಾನವನ್ನು ಸೀಲ್​ಡೌನ್​ ಮಾಡಲಾಗಿದೆ.

    ಮಾರಮ್ಮ ದೇಗುಲದ ಅರ್ಚಕರ ಪತ್ನಿಗೆ ಸೋಂಕು ತಗುಲಿತ್ತು. ಈ ಹಿನ್ನೆಲೆಯಲ್ಲಿ ಅರ್ಚಕರ ಪ್ರಾಥಮಿಕ ಸಂಪರ್ಕದಲ್ಲಿದ್ದ ದೇವಾಲಯದ 80 ಸಿಬ್ಬಂದಿಯನ್ನು ಕ್ವಾರಂಟೈನ್​ ಮಾಡಿ, ಜು.20ರಿಂದಲೇ ಗೊರವನಹಳ್ಳಿ ಮಹಾಲಕ್ಷ್ಮೀ ದೇಗುಲವನ್ನು ಸೀಲ್​ಡೌನ್​ ಮಾಡಲಾಗಿದೆ. ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡದ ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

    ಇದನ್ನೂ ಓದಿರಿ ಇನ್ನೂ 30 ವರ್ಷ ಕರೊನಾ ಹೋಗಲ್ಲ; ಬ್ರಹ್ಮಾಂಡ ಗುರೂಜಿ ಭವಿಷ್ಯ

    ವರಮಹಾಲಕ್ಷ್ಮೀ ಹಬ್ಬಕ್ಕೆ ಗೊರವನಹಳ್ಳಿಗೆ ಸಾವಿರಾರು ಭಕ್ತರು ಆಗಮಿಸುತ್ತಾರೆ. ಆದರೆ, ಈ ವರ್ಷ ದೇವಾಲಯ ತೆರೆಯುವ ಬಗ್ಗೆ ಸ್ಪಷ್ಟನೆ ಸಿಕ್ಕಿಲ್ಲ. ಈ ಬಗ್ಗೆ ಚರ್ಚಿಸಲಾಗುವುದು. ಹಬ್ಬದಲ್ಲಿ ದರ್ಶನದ ಬಗ್ಗೆ ಪ್ರಕಟಣೆ ಮೂಲಕ ಮಾಹಿತಿ ನೀಡುತ್ತೇವೆ ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್​ಕುಮಾರ್​ ತಿಳಿಸಿದ್ದಾರೆ.

    ದೇಗುಲ ನೌಕರನ ಪತ್ನಿಗೆ ಸೋಂಕು ದೃಢವಾಗಿರುವ ಹಿನ್ನೆಲೆಯಲ್ಲಿ ಜು.20ರಿಂದ ಮಹಾಲಕ್ಷ್ಮೀ ದೇವಾಲಯದಲ್ಲಿ ಭಕ್ತರ ಪ್ರವೇಶಕ್ಕೆ ಅವಕಾಶ ನಿರಾಕರಿಸಲಾಗಿದೆ. ಆದರೆ, ಪ್ರತಿನಿತ್ಯ ಪೂಜೆ ನಡೆಯುತ್ತಿದೆ. ಆಡಳಿತ ಮಂಡಳಿ ಸೂಚನೆಯಂತೆ ನಾವು ಕೆಲಸ ಮಾಡುತ್ತೇವೆ ಎಂದು ಪ್ರಧಾನ ಅರ್ಚಕ ಪ್ರಸನ್ನಕುಮಾರ್​ ತಿಳಿಸಿದ್ದಾರೆ.

    ಕಾರು ಅಡ್ಡಗಟ್ಟಿ 45.5 ಲಕ್ಷ ರೂ. ದರೋಡೆ, ಕದ್ದ ಹಣವನ್ನು ಟೈರ್​ನಲ್ಲಿ ಬಚ್ಚಿಟ್ಟಿದ್ದ…

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts